ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಸುಮಲತಾ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಬೆಂಬಲ: 'ಕೈ' ನಾಯಕರ ಸಮರ್ಥನೆ

ಸುಮಲತಾ ಅಂಬರೀಷ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದು, ಇದೀಗ ಕಾಂಗ್ರೆಸ್...

ಸುಮಲತಾ ಅಂಬರೀಷ್
Lingaraj Badiger
Updated On : 20 Mar 2019, 4:17 am
ಬೆಂಗಳೂರು: ಸುಮಲತಾ ಅಂಬರೀಷ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದ್ದು, ಇದೀಗ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಕಾರ್ಯಕರ್ತರ ನಡೆಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡಿದ್ದಾರೆ.
ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿ, ಸುಮಲತಾ ಅವರಿಗೆ ಪಕ್ಷದ ಮುಖಂಡರು ಬೆಂಬಲ ನೀಡಿಲ್ಲ. ಆದರೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಕೆಲವರು ಅಂಬರೀಷ್ ಅಭಿಮಾನಿಗಳಿದ್ದು, ಅಂಬರೀಷ್ ಮೇಲಿನ ಅಭಿಮಾನಕ್ಕೆ ಕೆಲವು ಕಾರ್ಯಕರ್ತರು ಹೋಗಿರಬಹುದು ಎಂದರು.
ರಾಮಲಿಂಗಾರೆಡ್ಡಿ ಮಾತನಾಡಿ, ಸುಮಲತಾ ಅಂಬರೀಷ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಆದರೆ ಅಂಬರೀಷ್ ಮೇಲಿನ ಅಭಿಮಾನಕ್ಕೆ ಕೆಲವರು ಹೋಗಿರುವ ಸಾಧ್ಯತೆಯಿದೆ ಎಂದರು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments