ಪ್ರಮೋದ್ ಮಧ್ವರಾಜ್ 
ರಾಜಕೀಯ

ಉಡುಪಿ: ಕಾಂಗ್ರೆಸ್ ಇಲ್ಲವೆ ಜೆಡಿಎಸ್ ನಿಂದ ಸ್ಪರ್ಧಿಸಲು ಸಿದ್ಧ ಎಂದ ಪ್ರಮೋದ್ ಮಧ್ವರಾಜ್

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಇಲ್ಲವೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್...

ಬೆಂಗಳೂರು: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಇಲ್ಲವೆ ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಹೇಳಿದ್ದಾರೆ.
ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ನಾಯಕರು ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಕೇಳಿದ್ದಾರೆ. ಅದೇ ರೀತಿ ಈ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟುಕೊಡುವಂತೆಯೂ ಕಾಂಗ್ರೆಸ್ ನಾಯಕರು ಕೋರಿದ್ದಾರೆ. ಹೀಗಾಗಿ ಮಾತುಕತೆ ಪ್ರಗತಿಯಲ್ಲಿದೆ ಎಂದರು.
ಹಾಗೊಂದು ವೇಳೆ ಕ್ಷೇತ್ರ ಬಿಟ್ಟು ಕೊಡದಿದ್ದರೆ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧ. ಪಕ್ಷ ಒಪ್ಪಿಕೊಂಡರೆ ಅಭ್ಯರ್ಥಿಯಾಗುತ್ತೇನೆ. ತಾವೇ ಅಭ್ಯರ್ಥಿ ಎಂಬುದು ಇನ್ನೂ ಅಂತಿಮವಾಗಿಲ್ಲ. ಕಾಂಗ್ರೆಸ್ ನಾಯಕರು ಒಪ್ಪಿಕೊಂಡರೆ ಜೆಡಿಎಸ್ ಚಿಹ್ನೆ ಅಡಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಪ್ರಮೋದ್ ಮಧ್ವರಾಜ್ ಹೇಳಿದರು. 
ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ತನ್ನ ಮೈತ್ರಿ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಆದರೆ ಜೆಡಿಎಸ್ ನಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಎದುರಾಗಿದ್ದು, ಪ್ರಮೋದ್ ಮದ್ವರಾಜ್ ಅವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಜೆಡಿಎಸ್ ಗೆ ಸ್ವಾಗತಿಸಿದ್ದಾರೆ. ಪಕ್ಷ ಸೇರಿದರೆ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT