ಸುಮಲತಾ-ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಸುಮಲತಾಗೆ ಬಿಜೆಪಿ ಬಹಿರಂಗ ಬೆಂಬಲ: ಇದಕ್ಕೆ ಸುಮಕ್ಕ ಹಾಗೂ ಎದುರಾಳಿ ನಿಖಿಲ್ ಹೇಳಿದ್ದೇನು?

ಮಂಡ್ಯ ಲೋಕಸಭಾ ಚುನಾವಣೆ ಕಾವು ಇದೀಗ ಜೋರಾಗಿದೆ. ಹೌದು ಪಕ್ಷೇತ್ತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಅಖಾಡಕ್ಕೆ ಧುಮುಕಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬಹಿರಂಗವಾಗಿ...

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಕಾವು ಇದೀಗ ಜೋರಾಗಿದೆ. ಹೌದು ಪಕ್ಷೇತ್ತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಅಖಾಡಕ್ಕೆ ಧುಮುಕಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬಹಿರಂಗವಾಗಿ ಬೆಂಬಲ ಸೂಚಿಸಿದ್ದು ಇದು ಜೆಡಿಎಸ್ ಪಕ್ಷದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು, ದೊಡ್ಡ ಮಟ್ಟದಲ್ಲಿ ನನ್ನನ್ನು ಸೋಲಿಸಲು ಒಂದಷ್ಟು ಶಕ್ತಿಗಳು ಪಣ ತೊಟ್ಟಿವೆ. ಇದನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದೆ. ಜನ ನನ್ನ ಪರವಾಗಿ ನಿಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಇದು ಚುನಾವಣೆಯಲ್ಲಿ ನಿರ್ಧಾರವಾಗುತ್ತದೆ ಎಂದು ಹೇಳಿದ್ದಾರೆ.
ಬಿಜೆಪಿಯಿಂದ ಅಧಿಕೃತವಾಗಿ ಬೆಂಬಲ ಘೋಷಣೆ ಆಗಿರುವುದು ನನಗೆ ಮತ್ತಷ್ಟು ಬಲ ಹೆಚ್ಚಿಸಿದೆ. ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಸುಮಲತಾ ಹೇಳಿದ್ದಾರೆ.
ನನ್ನನ್ನು ಯಾರೂ ನೇರವಾಗಿ ಭೇಟಿ ಮಾಡಿರಲಿಲ್ಲ. ಫೋನ್ ನಲ್ಲೂ ಹೇಳಿರಲಿಲ್ಲ. ಅಂಬರೀಶ್ ಅವರ ಮೇಲಿನ ಗೌರವದಿಂದ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ನನಗೆ ಬೆಂಬಲ ಸೂಚಿಸಿರುವುದು ನಿಜಕ್ಕೂ ತುಂಬಾ ಸಂತೋಷವಾಗಿದೆ. ನನ್ನ ಮನಸಿನಲ್ಲೂ ಬಿಜೆಪಿ ಬೆಂಬಲ ನೀಡಲಿ ಎಂದಿತ್ತು. ಈಗ ನನಗೆ ಮತ್ತಷ್ಟು ಶಕ್ತಿ ಬಂದಂತಾಯಿತು ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT