ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಐಟಿ ದಾಳಿ- ಕುಮಾರಸ್ವಾಮಿ
ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅಧಿಕಾರ ದುರುಪಯೋಗ ಪಡಿಸಿಕೊಂಡು ಜೆಡಿಎಸ್ - ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ಮುಂದುವರಿಸಿದ್ದು, ಚುನಾವಣಾ ಆಯೋಗ ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಒತ್ತಾಯಿಸಿದ್ದಾರೆ
ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಬೆಳಗಿನ ಜಾವ 4 ಗಂಟೆ ವರೆಗೆ ದಾಳಿ ಮಾಡಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾರು ಕಾರು ಬಾಡಿಗೆ ಪಡೆದಿದ್ದಾರೆ. ಮೈಸೂರಿನ ಸಿಎಫ್ ಟಿಆರ್ ಐ ನಲ್ಲಿ ಅಧಿಕಾರಿಗಳು ತಂಗಿದ್ದು, ಕಾಂಗ್ರೆಸ್ - ಜೆಡಿಎಸ್ ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರವನ್ನು ಬಲವಾಗಿ ಖಂಡಿಸುವುದಾಗಿ ಹೇಳಿರುವ ಮುಖ್ಯಮಂತ್ರಿ ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.