ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಸಚಿವ ಜಿ.ಟಿ.ದೇವೇಗೌಡ ಅವರು ಬುಧವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ. ಎರಡು ಕಡೆ ಪಕ್ಷದಿಂದಲೂ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕಿತ್ತು ಎಂದು ಸ್ಫೋಟಕ ಹೇಳಿಕೆಯನ್ನು ಕೊಟ್ಟಿದ್ದಾರೆ.
ಕುಮಾರಸ್ವಾಮಿ ಮುಖ್ಯಮಂತ್ರಿಯಾದಗಿನಿಂದ ಈ ರೀತಿ ಡೆಡ್‍ಲೈನ್ ಫಿಕ್ಸ್ ಮಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ ಬಹುಮತ ಇದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರಕ್ಕೆ ಆತಂಕ ಇಲ್ಲ. ಇನ್ನೂ ಲೋಕಸಭಾ ಚುನಾವಣೆಯ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ. ಅದೇನಿದ್ದರೂ ಲೋಕಸಭೆಯಲ್ಲಿ ಪ್ರಧಾನ ಮಂತ್ರಿಯಾಗಲೂ ಮಾತ್ರ ನಡೆಯುತ್ತದೆ ಎಂದು ಹೇಳಿದರು.
2 ತಿಂಗಳು ಮುಂಚೆಯೇ ನಾವು ಪ್ರಚಾರ ಮಾಡಿದ್ದರೆ ನಾವು ಹೆಚ್ಚು ಲಾಭ ಪಡೆಯಬಹುದಿತ್ತು ಆದರೆ ಕೊನೇ ಕ್ಷಣದಲ್ಲಿ ಕಾರ್ಯಕರ್ತರ ನಡುವೆ ಹೊಂದಾಣಿಕೆ ಸಾಧ್ಯವಾಗಲಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics