ಸಾಂದರ್ಭಿಕ ಚಿತ್ರ 
ರಾಜಕೀಯ

ಲೋಕಸಭೆ ಚುನಾವಣೆ ವೇಳೆ 46 ಐಟಿ ರೇಡ್: 39 ಕಾಂಗ್ರೆಸ್-ಜೆಡಿಎಸ್ ನಾಯಕರೇ ಟಾರ್ಗೆಟ್ !

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ವೇಳೆ ಆದಾಯ ತೆರಿಗೆ ಇಲಾಖೆ ರಾಜ್ಯದ ಹಲವು ಭಾಗಗಳಲ್ಲಿ ದಾಳಿ ನಡೆಸಿತ್ತು. ಆದರೆ ಚುನಾವಣೆ ವೇಳೆ ನಡೆದ ...

ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ವೇಳೆ ಆದಾಯ ತೆರಿಗೆ ಇಲಾಖೆ ರಾಜ್ಯದ ಹಲವು ಭಾಗಗಳಲ್ಲಿ ದಾಳಿ ನಡೆಸಿತ್ತು.ಆದರೆ ಚುನಾವಣೆ ವೇಳೆ ನಡೆದ ದಾಳಿಯಿಂದಾಗಿ ಆದಾಯ ತೆರಿಗೆ ಇಲಾಖೆ ಕಾರ್ಯಕ್ಕೆ ಭಾರೀ ಪ್ರಮಾಣದಲ್ಲಿ ಟೀಕೆಗಳು ವ್ಯಕ್ತವಾದವು.
ಐಟಿ ದಾಳಿ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರುಗಳನ್ನು ಟಾರ್ಗೆಟ್ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು, 2019ರಲ್ಲಿ ಅಂದರೆ ಲೋಕಸಭೆ ಚುನಾವಣೆ ವೇಳೆ 46 ಐಟಿ ದಾಳಿಗಳು ನಡೆದಿದ್ದವು, ಅದರಲ್ಲಿ  36 ದಾಳಿಗಳು ಕಾಂಗ್ರೆಸ್  ಮತ್ತು ಜೆಡಿಎಸ್ ನಾಯಕರುಗಳ ಮನೆ ಮೇಲೆ ನಡೆದಿತ್ತು.
2018ರ ವಿಧಾನಸಭೆ ಚುನಾವಣೆ ವೇಳೆ 34 ದಾಳಿಗಳು ನಡೆದಿದ್ದವು, ಆಗಲೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರೇ ಟಾರ್ಗೆಟ್ ಆಗಿದ್ದರು. ಆದರೆ 2014ರ ಚುನಾವಣೆ ವೇಳೆ ಯಾವುದೇ ರೇಡ್ ಗಳು ನಡೆದಿರಲಿಲ್ಲ, 
ಆಡಳಿತ ಪಕ್ಷ ಜನರ ಮನಸಲ್ಲಿ ಭಯ ಮೂಡಿಸುವ  ತಂತ್ರ ಇದಾಗಿದೆ, ಐಟಿ, ಇಡಿ, ಮತ್ತು ಸಿಬಿಐ ಮುಂತಾದ ಏಜೆನ್ಸಿಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಕೇಂದ್ರ ಮಾಜಿ ಸಚಿವ ಕಪಿಲ್ ಸಿಬಲ್ ಹೇಳಿದ್ದಾರೆ. 2018ರ ವಿಧಾನಸಭೆ ಚುನಾವಣೆ ವೇಳೆ ಹಾಗೂ ನಂತರದಲ್ಲಿ ಸಚಿವ ಡಿ,ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿಯಾಗಿತ್ತು,
ಐಟಿ ದಾಳಿಯ ವಿಷಯವನ್ನು ಕಾಂಗ್ರೆಸ್ ಮತ್ತು ಜೆಡಿಎಸ್  ಪಕ್ಷಗಳು ರಾಜಕೀಯಗೊಳಿಸುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT