ರಾಜಕೀಯ

ಭ್ರಷ್ಟ ರಾಜಕಾರಣದಲ್ಲಿ ಕಾಂಗ್ರೆಸ್ ನಂಬಿಕೆ: ಬಿ.ಎಸ್. ಯಡಿಯೂರಪ್ಪ

Nagaraja AB

ಧಾರವಾಡ:  ಕಾಂಗ್ರೆಸ್  ಪಕ್ಷದಲ್ಲಿನ 20ಕ್ಕೂ ಹೆಚ್ಚು ಶಾಸಕರಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆಡಳಿತಕ್ಕೆ ವಿರೋಧವಿದೆ. ಆದಾಗ್ಯೂ, ಬಿಜೆಪಿಯನ್ನು ಅಧಿಕಾರಕ್ಕೆ ಬರುವುದನ್ನು ತಡೆಯುವ ಉದ್ದೇಶದಿಂದ ಹಿರಿಯ ಕಾಂಗ್ರೆಸ್ ನಾಯಕರು ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟ ರಾಜಕಾರಣದಲ್ಲಿ ಕಾಂಗ್ರೆಸ್ ನಂಬಿಕೆ ಹೊಂದಿದ್ದು, ಕುಂದಗೋಳ ಉಪಚುನಾವಣೆಯಲ್ಲಿ   ಹಣ ಹಾಗೂ ಅಧಿಕಾರ ಬಲದಿಂದ ಬಿಜೆಪಿಯನ್ನು ಸೋಲಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಕುಂದಗೋಳದ ಜನರಿಗೆ  ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಬಗ್ಗೆ ಅರಿವಿದೆ  ಎಂದರು.

ಕಳೆದ 11 ತಿಂಗಳಲ್ಲಿ ಸಮ್ಮಿಶ್ರ ಸರ್ಕಾರ ಸಾರ್ವಜನಿಕರಿಗೆ ಉಪಯುಕ್ತವಾದ ಯಾವುದೇ ಕೆಲಸಗಳನ್ನು ಮಾಡಿಲ್ಲ, ಕಾಂಗ್ರೆಸ್ ನಾಯಕರಿಗೂ ಇದು ಗೊತ್ತಿದೆ. ಆದರೂ, ಅಸಹಾಯಕ ಪರಿಸ್ಥಿತಿಯಲ್ಲಿದ್ದಾರೆ.  ಅದಕ್ಷ ಸರ್ಕಾರದ ವಿರುದ್ಧ ಮಾತನಾಡುತ್ತಿಲ್ಲ, ಸರ್ಕಾರಕ್ಕೆ ಅವರೇ ಬೆಂಬಲ ನೀಡಿರುವುದರಿಂದ ಏನು ಮಾಡಲಾಗದಂತಹ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದರು.

ಈ ಮಧ್ಯೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ  ಕಾಂಗ್ರೆಸ್ ಪಕ್ಷದ ವಿಲನ್ ಆಗಿದ್ದಾರೆ. ಅವರಿಂದಲೇ ಪಕ್ಷ ನಾಶವಾಗುತ್ತಿದೆ. ರಾಜಕೀಯ ಲಾಭಕ್ಕಾಗಿ ಧರ್ಮಗಳನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

SCROLL FOR NEXT