ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ರಾಜೀವ್ ಗಾಂಧಿ ಕುರಿತ ಹೇಳಿಕೆ ಮೋದಿಯವರ ಮನಸ್ಥಿತಿ ತೋರಿಸುತ್ತದೆ: ಎಚ್ ಡಿ ಕುಮಾರಸ್ವಾಮಿ

ರಾಜೀವ್ ಗಾಂಧಿ ಭ್ರಷ್ಟಾಚಾರಿ ನಂಬರ್ 1 ಆಗಿಯೇ ಮೃತಪಟ್ಟರು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

ಬೆಂಗಳೂರು:  ರಾಜೀವ್ ಗಾಂಧಿ ಭ್ರಷ್ಟಾಚಾರಿ ನಂಬರ್ 1 ಆಗಿಯೇ ಮೃತಪಟ್ಟರು ಎಂಬ   ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ನರೇಂದ್ರ ಮೋದಿ ಅವರ ಹೇಳಿಕೆ ದ್ವೇಷಕಾರಕ, ಖಂಡನೀಯವಾಗಿದ್ದು, ಇದು ಪ್ರಧಾನಿ ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಅವರ ಹೇಳಿಕೆಯಲ್ಲಿ ಭಯ ಹಾಗೂ ಹತಾಶೆ ಕಾಣುತ್ತಿರುವುದು ಸ್ಪಷ್ಟ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡಾ  ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಉತ್ತರ  ಪ್ರದೇಶದ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ರಾಹುಲ್ ಗಾಂಧಿ ಅವರನ್ನು ಟೀಕಿಸುವ ಭರದಲ್ಲಿ  ಮೋದಿ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ತೀವ್ರವಾಗಿ ಟೀಕಿಸಿದ್ದರು.
ನಿಮ್ಮ ತಂದೆ ರಾಜೀವ್ ಗಾಂಧಿಗೆ   ಅವರ ಹೊಗಳುಭಟ್ಟರು ಮಿಸ್ಟರ್ ಕ್ಲೀನ್ ಎಂದು ಬಣ್ಣಿಸಿರಬಹುದು ಆದರೆ, ರಾಜೀವ್ ಗಾಂಧಿ ಭ್ರಷ್ಟಾಚಾರಿ ನಂಬರ್ 1 ಆಗಿಯೇ ಮೃತಪಟ್ಟರು. ಈ ಮೋದಿ ಬಾಯಿಯಿಲ್ಲಿ ಚಮಚ ಇರಿಸಿಕೊಂಡು ಹುಟ್ಟಿದವನಲ್ಲ ಎಂದು ನಾಮ್ ಧಾರ್ ಗಮನಿಸಬೇಕು ಎಂದು ಮೋದಿ ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಕಾಂಗ್ರೆಸ್ ಪಕ್ಷದಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿಯಾಗುತ್ತಿದ್ದಂತೆ Xi Jinping ಶಾಂತಿ ಮಂತ್ರ; US-China ನಡುವೆ ಶುರುವಾಯ್ತಾ ಹೊಸ ಸ್ನೇಹ ಪರ್ವ?

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ; ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!