ಸಾಂದರ್ಭಿಕ ಚಿತ್ರ 
ರಾಜಕೀಯ

ಪ್ರಧಾನಿಗೆ ಮಾರ್ಯಾದೆ ಕೊಡದ ಸಿದ್ದರಾಮಯ್ಯ ಅನಾಗರಿಕ: ಶ್ರೀನಿವಾಸ ಪ್ರಸಾದ್‌

ಪ್ರಧಾನಿ ನರೇಂದ್ರ ಮೋದಿಗೆ ಮಾರ್ಯಾದೆ ಕೊಡದ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅನಾಗರಿಕ, ಭಂಡ, ಹುಂಬ ಮನುಷ್ಯ ಎಂದು ಮಾಜಿ ಸಚಿವ ಶ್ರೀನಿವಾಸ್‌ ಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ.

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿಗೆ ಮಾರ್ಯಾದೆ ಕೊಡದ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ  ಸಿದ್ದರಾಮಯ್ಯ ಅನಾಗರಿಕ, ಭಂಡ, ಹುಂಬ ಮನುಷ್ಯ ಎಂದು ಮಾಜಿ ಸಚಿವ ಶ್ರೀನಿವಾಸ್‌ ಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ ಪ್ರಸಾದ್‌, ಪ್ರಧಾನಿ  ನರೇಂದ್ರ ಮೋದಿಗೆ ಕನಿಷ್ಠ ಮರ್ಯಾದೆ ಕೊಡುವ ಜ್ಞಾನ ಆತನಿಗಿಲ್ಲ. ಪ್ರಧಾನಮಂತ್ರಿ ಎಂದರೆ 120 ಕೋಟಿ ಜನರ ಪ್ರತಿನಿಧಿ. ಇದನ್ನು ಸಿದ್ದರಾಮಯ್ಯ ಮರೆತಿದ್ದಾರೆ ಎಂದು ಕಿಡಿಕಾರಿದರು.
ಪ್ರಧಾನಿ ಬಗ್ಗೆ ಹೇಗೆ ಮಾತನಾಡಬೇಕು ಎಂಬುದು ತಿಳಿಯದಷ್ಟು  ಸಿದ್ದರಾಮಯ್ಯ ಅನಾಗರಿಕ, ಸಂಸ್ಕೃತಿ ಇಲ್ಲದವ ಎಂದು ಏಕವಚನದಲ್ಲಿಯೇ ಟೀಕಿಸಿದರು.ಸಿದ್ದರಾಮಯ್ಯ ಒಬ್ಬ ಉಡಾಫೆ ಮನುಷ್ಯ. ಈತ ಈ ರೀತಿ ಮಾತನಾಡುವುದರಿಂದಲೇ ಚಾಮುಂಡೇಶ್ವರಿಯಲ್ಲಿ ಜನರು ಸೋಲಿಸಿದ್ದು ಎಂದರು.
ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್‌, ಜೆಡಿಎಸ್‌ ಸಮ್ಮಿಶ್ರ ಸರಕಾರ ಉಳಿಯುವುದಿಲ್ಲ. ಈಗಾಗಲೇ ಉಭಯ ಪಕ್ಷಗಳವರು ಆರೋಪ -ಪ್ರತ್ಯಾರೋಪಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಶ್ರೀನಿವಾಸಪ್ರಸಾದ್‌ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel