ಸಿಎಂ ಕುರ್ಚಿ ಖಾಲಿ ಇಲ್ಲ, ಎಚ್ಡಿಕೆ ಒಳ್ಳೆಯ ಕೆಲಸ ಮಾಡ್ತಿದ್ದಾರೆ: ಊಹಾಪೋಹಗಳಿಗೆ ಸಿದ್ದರಾಮಯ್ಯ ತೆರೆ
ಸದ್ಯ ಮುಖ್ಯ.ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಎಚ್.ಡಿ ಕುಮಾರಸ್ವಾಮಿ ಮೈತ್ರಿ ಸರ್ಕಾರದ ಸಿಎಂ ಆಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ...
ಹುಬ್ಬಳ್ಳಿ: ಸದ್ಯ ಮುಖ್ಯ.ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಎಚ್.ಡಿ ಕುಮಾರಸ್ವಾಮಿ ಮೈತ್ರಿ ಸರ್ಕಾರದ ಸಿಎಂ ಆಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೆಲವರು ಅಭಿಮಾನದಿಂದ ನಾನು ಮುಖ್ಯಮಂತ್ರಿ ಆಗಲಿ ಎಂದು ಹೇಳುತ್ತಾರೆ, ಅದು ತಪ್ಪಾ ಎಂದು ಪ್ರಶ್ನಿಸಿದರು. ಸದ್ಯ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ
ಆದ್ರೆ, ಕೊಟ್ರೆ, ಇದ್ರೆ, ಇದಕ್ಕೆಲ್ಲಾ ಉತ್ತರವಿಲ್ಲ ಎಂದು ಹೇಳಿದ ಅವರು.ಎಂ.ಬಿ.ಪಾಟೀಲ್ ಡಾ.ಸುಧಾಕರ್ ಸೇರಿದಂತೆ ಕೆಲ ಶಾಸಕರು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.