ರಾಜಕೀಯ

ಬೆಂಗಳೂರು: 63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಧಿಸೂಚನೆ ಪ್ರಕಟ

Shilpa D
ಬೆಂಗಳೂರು: ಅವಧಿ ಮುಕ್ತಾಯಗೊಂಡಿರುವ ರಾಜ್ಯದ 63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇಂದು ಅಧಿಸೂಚನೆ ಹೊರಬಿದ್ದಿದೆ. 
ಮೇ 16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮೇ 17 ನಾಮಪತ್ರ ಪರಿಶೀಲಿಸಲಾಗುವುದು. ಮೇ 20 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನ. ಮೇ 29ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆ ವರೆಗೆ ಮತದಾನ ನಡೆಯಲಿದೆ. 
ರಾಜ್ಯದ 22 ಜಿಲ್ಲೆಗಳ 22 ನಗರ ಪಾಲಿಕೆ, 33 ನಗರ ಸಭೆ, 22 ಪಟ್ಟಣ ಪಂಚಾಯತ್ ಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭಗೊಂಡಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಇದರಿಂದ ತ್ರಿಕೋನ ಸ್ಪರ್ಧೆ ಏರ್ಪಡಲಿದೆ.
ಮೇ 20 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 31ರಂದು ಮತ ಎಣಿಕೆ ನಡೆಯಲಿದೆ. ಮತದಾನ ನಡೆಯುವ ಕ್ಷೇತ್ರಗಳಲ್ಲಿ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 29ರಂದು ನಡೆಯುವ ಚುನಾವಣೆಯಲ್ಲಿ 14 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹತೆ ಪಡೆದಿದ್ದಾರೆ.
SCROLL FOR NEXT