ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಸಂದೇಶ ರವಾನಿಸಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ನಡೆಯಲಿರುವ ಜಂಟಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ಇಲ್ಲಿ ನಾಡಿದ್ದು 19ರಂದು ಉಪ ಚುನಾವಣೆ ನಡೆಯಲಿದೆ. ಇದುವರೆಗೆ ಚುನಾವಣಾ ರ್ಯಾಲಿಯಿಂದ ದೂರವುಳಿದಿದ್ದ ಕುಮಾರಸ್ವಾಮಿ ನಾಳೆ ಕುಂದಗೋಳದಲ್ಲಿ ಮತ್ತು ನಾಡಿದ್ದು ಚಿಂಚೋಳಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೈತ್ರಿ ಕೂಟದಲ್ಲಿ ನಾಯಕರ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂದು ಊಹಾಪೋಹಗಳು ಕೇಳಿಬರುತ್ತಿದ್ದು ಇದಕ್ಕೆ ತೆರೆ ಎಳೆಯಲು ಸಿಎಂ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾಂಗ್ರೆಸ್ ನಾಯಕರು ಶತಾಯಗತಾಯ ಯತ್ನಿಸುತ್ತಿದ್ದರೆ ಇಂದು ಸಿಎಂ ಕುಮಾರಸ್ವಾಮಿ ಮಂಡ್ಯದ ರೆಸಾರ್ಟ್ ನಲ್ಲಿ ತಂಗಿದ್ದು ಅಲ್ಲಿಂದ ನಾಳೆ ಕುಂದಗೋಳಕ್ಕೆ ತೆರಳಲಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos