ಡಿಕೆ ಶಿವಕುಮಾರ್ 
ರಾಜಕೀಯ

ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿ ಜೊತೆಗೆ ಗುರುತಿಸಿಕೊಂಡಿಲ್ಲ- ಡಿ ಕೆ ಶಿವಕುಮಾರ್

ರಾಜ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದಾಗಿನಿಂದಲೂ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಲೇ ಇದೆ ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದಾಗಿನಿಂದಲೂ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಲೇ ಇದೆ ಎಂದು  ಜಲಸಂಪನ್ಮೂಲ  ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಸರ್ಕಾರ ಪತನಗೊಳಿಸುವುದಾಗಿ ಬಿಜೆಪಿ ಮುಖಂಡರು ಹೇಳುತ್ತಲೇ ಬಂದಿದ್ದಾರೆ. ಹೇಗೆ ಸರ್ಕಾರವನ್ನು ಬದಲಾವಣೆ ಮಾಡಲು ಸಾಧ್ಯ,ಪಕ್ಷಾಂತರ ವಿರೋಧಿ ಕಾನೂನು ಇದೆ ಎಂದು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಿಜೆಪಿ ಸರ್ಕಾರ ಮಾಡ್ತೀವಿ ಅಂತಾ ಹಗಲು ಗನಸು ಕಾಣುತ್ತಿದ್ದಾರೆ ಅಷ್ಟೇ. ಯಾವ ಕಾಂಗ್ರೆಸ್ ಶಾಸಕರೂ ಅವರ ಕೈ ಗೆ ಸಿಗಲ್ಲ ಎಂದರು.

ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಬಿಜೆಪಿ ಜೊತೆ ಗುರುತಿಸಿಕೊಂಡಿಲ್ಲ. ಒಬ್ಬರು ಮಾತ್ರ ಗುರುತಿಸಿಕೊಂಡಿದ್ದರು. ಅವರು ಈಗಾಗಲೇ ರಾಜೀನಾಮೆ ನೀಡಿದ್ದಾರೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT