ವಿಶ್ವನಾಥ್ ಗೆ ದೇವರು ಒಳ್ಳೆಯ ಬುದ್ದಿ ಕೊಡಲಿ: ಸಿದ್ದರಾಮಯ್ಯ
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತಿಯಾಗಿದ್ದಾರೆ. ಅವರ...
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತಿಯಾಗಿದ್ದಾರೆ. ಅವರ, ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲು ಮೈತ್ರಿ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ತಮ್ಮ ಬಾಯಿ ಕಟ್ಟಿಹಾಕಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಕಿಡಿಗೇಡಿತನದ ಹೇಳಿಕೆಗಳನ್ನು ಮುಂದುವರಿಸುತ್ತಿರುವ ವಿಶ್ವನಾಥ್ ಅವರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಟ್ವೀಟ್ ಮಾಡಿದ್ದಾರೆ.