ಹುಬ್ಬಳ್ಳಿ: ಮೈತ್ರಿ ಸರ್ಕಾರಕ್ಕೆ ಸಿದ್ದರಾಮಯ್ಯ ಟೈಂಬಾಂಬ್ ಫಿಕ್ಸ್ ಮಾಡಿದ್ದಾರೆ. ಅವರು ಬಟನ್ ಒತ್ತಿದರೆ ಸರ್ಕಾರ ಬ್ಲಾಸ್ಟ್ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಕುಂದಗೋಳ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ್ರ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸಿದ್ದರಾಮಯ್ಯ ಟೈಂ ಬಾಂಬ್ ಬಟನ್ ಒತ್ತಲಿದ್ದಾರೆ. ಆಗ ಈ ಸರ್ಕಾರ ಪತನವಾಗಲಿದೆ, ಅಲ್ಲಿಗೆ ಸಿದ್ದರಾಮಯ್ಯ ನಾಟಕ ಕೂಡ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ.
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಯವರ ಗೆಲುವು ಸಿದ್ದರಾಮಯ್ಯನವರಿಗೆ ಬೇಕಾಗಿಲ್ಲ. ಸುಮಲತಾ ಅವರ ಸ್ಪರ್ಧೆಯ ಹಿಂದೆ ಸಿದ್ದರಾಮಯ್ಯನವರಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಹೊಂದಾಣಿಕೆಯಿಲ್ಲ. ವಿಶ್ವನಾಥ್ ಹೇಳಿಕೆಗಳನ್ನು ಗಮನಿಸಿದರೆ ಇದು ಗೊತ್ತಾಗುತ್ತದೆ.
ಇನ್ನೂ ಸಿದ್ದರಾಮಯ್ಯ ಮಾಜಿ ಸಿಎಂ ಆಗಿದ್ದರೂ ಸರ್ಕಾರಿ ಬಂಗ್ಲೆ ಕಾವೇರಿಯನ್ನು ಇನ್ನೂ ತೆರವುಗೊಳಿಸಿಲ್ಲ, ಈ ಬಗ್ಗೆ ಅವರಿಗೆ .ಯಾವ ಮುಜುಗರವೂ ಆಗುತ್ತಿಲ್ಲ ಎಂದು ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics