ಯಡಿಯೂರಪ್ಪ 
ರಾಜಕೀಯ

ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ದೊಡ್ಡ ರಾಜಕೀಯ ಬದಲಾವಣೆ: ಯಡಿಯೂರಪ್ಪ

ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿ: ಕುಂದಗೋಳ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜ್ಯದಲ್ಲಿ ದೊಡ್ಡ ರಾಜಕೀಯ ಬದಲಾವಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಬೇಕು, ಮೈತ್ರಿ ಪಕ್ಷಗಳ ಕಚ್ಚಾಟ ನಿಲ್ಲಬೇಕು ಎಂದು ರಾಜ್ಯದ ಜನ ಬಯಸುತ್ತಿದ್ದಾರೆ. ಆದರೆ ಮೈತ್ರಿ ಪಕ್ಷಗಳಲ್ಲಿ ದಿನದಿಂದ ದಿನಕ್ಕೆ ಕಚ್ಚಾಟ ಹೆಚ್ಚಾಗಲಿದೆ. ಚುನಾವಣಾ ಫಲಿತಾಂಶದ ಬಳಿಕ ಇದು ಇನ್ನಷ್ಟು ಹೆಚ್ಚಾಗಲಿದೆ ಎಂದು ಭವಿಷ್ಯ ನುಡಿದರು.
ವೀರಶೈವ ಲಿಂಗಾಯತ ಸಮಾಜದ ಮತ ಕೇಳುವ ಹಕ್ಕು ಕಾಂಗ್ರೆಸ್‍ನವರಿಗಿಲ್ಲ. ಜೆಡಿಎಸ್‍ನವರು ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದು ಖಂಡನೀಯ ಎಂದು ಹೇಳಿದರು.
ಸರ್ಕಾರವನ್ನು ಪತನಗೊಳಿಸಲು ನಾವು ಸಂಚು ಮಾಡಿಲ್ಲ. ನಾವು ವಿರೋಧ ಪಕ್ಷದಲ್ಲಿ ಕುಳಿತು ಕೆಲಸ ಮಾಡಲು ಸಿದ್ಧವಿದ್ದೇವೆ. ಸಿದ್ದರಾಮಯ್ಯ ಬೆಂಬಲಿಗರು ಕಾಲುಕೆರೆದು ಜಗಳ ಮಾಡುತ್ತಿದ್ದಾರೆ. ಸರ್ಕಾರ ತನ್ನಿಂದ ತಾನಾಗಿ ಪತನಗೊಳ್ಳಲಿದೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ತಮ್ಮ ಬೆಂಬಲವಿದೆ. ಅದನ್ನೇ ನಾನು ಹೇಳುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್