ರಾಜಕೀಯ

ವ್ಯತಿರಿಕ್ತ ಹೇಳಿಕೆ ನೀಡದಂತೆ ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಸಿಎಂ ಕುಮಾರಸ್ವಾಮಿ ಮನವಿ

Lingaraj Badiger
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿದ್ದು, ಕೊನೆಗೂ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ವ್ಯತಿರಿಕ್ತ ಹೇಳಿಕೆಗಳನ್ನು ನೀಡದಂತೆ ಉಭಯ ಪಕ್ಷಗಳ ನಾಯಕರು ಶನಿವಾರ ಮನವಿ ಮಾಡಿದ್ದಾರೆ.
ಕೇಂದ್ರದಲ್ಲಿ ಇನ್ನೊಂದು ಹೊಸ ಸರ್ಕಾರ ರಚನೆಯಾಗುವ ಮಹತ್ತರ ಘಟ್ಟದಲ್ಲಿ ನಾವಿದ್ದೇವೆ. ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆ ನಮ್ಮೆಲ್ಲರ ಆಶಯವಾಗಿದ್ದು, ಅದನ್ನು ಸಾಕಾರಗೊಳಿಸುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರು ವ್ಯತಿರಿಕ್ತ ಹೇಳಿಕೆಗಳನ್ನು ನೀಡುವುದು ಇಂತಹ ಪ್ರಯತ್ನಗಳಿಗೆ ಹಿನ್ನಡೆಯಾಗಬಹುದು. ಆದ್ದರಿಂದ ಉಭಯ ಪಕ್ಷಗಳ ಮುಖಂಡರು ಇಂತಹ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಯಾವುದೇ ವಿಭಿನ್ನ, ವಿವಾದಾತ್ಮಕ ಹೇಳಿಕೆ ನೀಡದಂತೆ ನನ್ನ ಕಳಕಳಿಯ ಮನವಿ ಎಂದು ಸಿಎಂ ಟ್ವೀಟ್​ ಮಾಡಿದ್ದಾರೆ.
ಇಂದು ಬೆಳಗ್ಗೆ ಜೆಡಿಎಸ್​ ಪಕ್ಷದ ಹಿರಿಯ ಮುಖಂಡ ಬಸವಾಜ ಹೊರಟ್ಟಿ ಅವರು, ಗೊಂದಲದಲ್ಲಿ ಮೈತ್ರಿ ಸರ್ಕಾರ ನಡೆಸುವುದು ಬೇಡ. ವಿಧಾನಸಭೆ ವಿಸರ್ಜಿಸಿ, ಚುನಾವಣೆ ಎದುರಿಸೋಣ. ಬಹುಮತ ಪಡೆದ ಪಕ್ಷ ಸರ್ಕಾರ ರಚಿಸಲಿ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.
SCROLL FOR NEXT