ರಾಜಕೀಯ

ಚುನಾವಣೋತ್ತರ ಸಮೀಕ್ಷೆ ಬೆನ್ನಲ್ಲೇ ಆಪರೇಷನ್ ಕಮಲಕ್ಕೆ ರೋಷನ್ ಬೇಗ್ ಮೊದಲ ಹಿಟ್ ವಿಕೆಟ್?

Srinivasamurthy VN
ಬೆಂಗಳೂರು: ಚುನಾವಣೋತ್ತರ ಸಮೀಕ್ಷೆ ಬಹಿರಂಗವಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ತರ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಆಪರೇಷನ್ ಕಮಲಕ್ಕೆ ಬಿಜೆಪಿ ಚಾಲನೆ ನೀಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಮೇ 23ರ ಲೋಕಸಭಾ ಚುನಾವಣಾ ಫಲಿತಾಂಶ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಮತಗಟ್ಟೆ ಸಮೀಕ್ಷಾ ವರದಿಗಳು ಹೇಳುತ್ತಿವೆ. ಆದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಕ್ಕೆ ಚುನಾವಣಾ ಫಲಿತಾಂಶ ನಾಂದಿ ಹಾಡಲಿದೆ ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತಹ ಬೆಳವಣಿಗೆಗಳು ಒಂದಕ್ಕೊಂದುಪೂರಕವಾಗಿ ನಡೆಯುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಇಂದು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ರೋಷನ್ ಬೇಗ್ ಅವರು ಕಾಂಗ್ರೆಸ್ದ ವಿರುದ್ಧವೇ ಬಹಿರಂಗ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದಾರೆ. 
ಮತಗಟ್ಟೆ ಸಮೀಕ್ಷಾ ವರದಿ ಪ್ರಕಟವಾದ ಬೆನ್ನಲ್ಲೇ ಗೋಕಾಕ್ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅತೃಪ್ತ ಶಾಸಕರನ್ನು ಒಟ್ಟುಗೂಡಿಸಲು ಇನ್ನಿಲ್ಲದ ಕಸರತ್ತು ಆರಂಭಿಸಿದ್ದಾರೆ ಎನ್ನಲಾಗಿದೆ. ಕೈ ನಾಯಕತ್ವದ ವಿರುದ್ದ ಅಸಮಾಧಾನಗೊಂಡಿರುವ ಶಾಸಕರನ್ನು ಒಟ್ಟು ಸೇರಿಸಿ ರಾಜೀನಾಮೆ ಪ್ರಕಟಿಸುವುದು ಅಂತೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಭೇಟಿಗೆ ದಿನಾಂಕ ನಿಗದಿಗೊಳಿಸುವ ಪ್ರಯತ್ನದಲ್ಲಿದ್ದಾರೆ.
ಇತ್ತ ದಿಡೀರ್ ಆಗಿ ಮಾಜಿ ಸಚಿವ, ಅಲ್ಪಸಂಖ್ಯಾತ ಸಮುದಾಯದ ಹಿರಿಯ ನಾಯಕ ರೋಷನ್ ಬೇಗ್ ಪಕ್ಷದ ನಾಯಕತ್ವದ ವಿರುದ್ದ ಬಹಿರಂಗ ಸಮರ ಸಾರಿದ್ದಾರೆ. ಆ ಮೂಲಕ ಕಾಂಗ್ರೆಸ್ ತೊರೆಯುವ ಸಂದೇಶ ನೀಡಿದ್ದಾರೆ. ಮತ್ತೊಂದೆಡೆ ಬಿಜೆಪಿ ನಾಯಕತ್ವದ ಬಗ್ಗೆ ಹಾಗೂ ಕೋಮುವಾದಿ ಬಿಜೆಪಿ ಬಗ್ಗೆಯೂ ಪ್ರಸಂಶೆ ವ್ಯಕ್ತಪಡಿಸಿರುವುದು ರೋಷನ್ ಬೇಗ್ ಬಿಜೆಪಿಯತ್ತ ವಾಲಲಿದ್ದಾರೆಂಬ ಚರ್ಚೆ ಹುಟ್ಟುಹಾಕಿದ್ದಾರೆ.
SCROLL FOR NEXT