ಎಚ್. ವಿಶ್ವನಾಥ್ 
ರಾಜಕೀಯ

ಮೈತ್ರಿ ಸರ್ಕಾರದಿಂದ ಪಕ್ಷಗಳಿಗಿಂತ ಜನರಿಗೆ ಆಗುವ ಲಾಭ ಮುಖ್ಯ: ಎಚ್‌ ವಿಶ್ವನಾಥ್‌

ಪದೇ ಪದೇ ಚುನಾವಣೆಗೆ ಹೋಗಿ ಜನರ ತೆರಿಗೆ ಹಣ ಪೋಲು ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ...

ಕೋಲಾರ: ಪದೇ ಪದೇ ಚುನಾವಣೆಗೆ ಹೋಗಿ ಜನರ ತೆರಿಗೆ ಹಣ ಪೋಲು ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಹೇಳಿದ್ದಾರೆ. 
ಕೋಲಾರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಏನು ಲಾಭವಾಯಿತು ಎಂಬುದು ಮುಖ್ಯವಲ್ಲ, ಜನರಿಗೆ ಏನು ಲಾಭವಾಗಿದೆ ಎಂಬುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಹಲವು ಜನ ಕಲ್ಯಾಣ ಕಾರ್ಯಕ್ರಮ ಜಾರಿಗೆ ತರುತ್ತಿರುವಾಗ ಅದನ್ನು ಎರಡೂ ಪಕ್ಷಗಳು ಸೇರಿ ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಅವರು ಹೇಳಿದರು.
ಸದ್ಯ ಸರ್ಕಾರವನ್ನು ಉಳಿಸಿಕೊಳ್ಳುವುದು, ಬಿಡುವುದರ ಬಗ್ಗೆ ಕಾಂಗ್ರೆಸ್ ನಾಯಕರು ಅಲೋಚನೆ ಮಾಡಬೇಕು, ಮೈತ್ರಿ ಪಕ್ಷಗಳಲ್ಲಿ ಗೊಂದಲ ಸಹಜ, ಅದನ್ನು ನಿವಾರಣೆ ಮಾಡಿಕೊಂಡು ಹೋಗಬೇಕು, ಹಿಂದೆ ಯುಪಿಎ ಅವಧಿಯಲ್ಲಿ ಡಾ. ಮನಮೋಹನ್ ಸಿಂಗ್ ಅವರು 23 ಪಕ್ಷಗಳ ನಾಯಕರನ್ನು ಹೊಂದಾಣಿಕೆ ಮಾಡಿ ಆಡಳಿತ ಮಾಡಿದ್ದರು. ಇಲ್ಲಿ ಕೇವಲ ಎರಡು ಪಕ್ಷಗಳ ನಡುವೆ ಹೊಂದಾಣಿಕೆ ಮಾಡಿಕೊಂಡು ಆಡಳಿತ ಕೊಡುವುದಕ್ಕೆ ಇರುವ ಅಡ್ಡಿ ನಿವಾರಣೆ ಮಾಡುವುದು ಬಹಳ ಮುಖ್ಯ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!