ರಾಜಕೀಯ

ರೋಷನ್ ಬೇಗ್ ಚುನಾವಣೆಯಲ್ಲಿ ನನ್ನ ವಿರುದ್ಧ ಕೆಲಸ ಮಾಡಿದ್ದಾರೆ: ರಿಜ್ವಾನ್ ಅರ್ಷದ್ ವಾಗ್ದಾಳಿ

Sumana Upadhyaya
ಬೆಂಗಳೂರು: ರೋಷನ್ ಬೇಗ್ ಅವರು ತಾನೇ ದೊಡ್ಡ ನಾಯಕ ಅಂದುಕೊಂಡಿದ್ದಾರೆ. ಅವರಿಲ್ಲದಿದ್ದರೆ ತಾನು ಗೆಲ್ಲಲು ಸಾಧ್ಯವಿಲ್ಲ ಅಂದುಕೊಂಡಿದ್ದಾರೆ. ಆದರೆ ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ಹೆಚ್ಚಿನ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಷನ್ ಬೇಗ್ ಅವರ ಶಿವಾಜಿನಗರ ಕ್ಷೇತ್ರದ ಜನ ನನಗೆ ಬೆಂಬಲಿಸಿದ್ದಾರೆ. ಅವರಿಗೂ ಅದು ಗೊತ್ತಿದೆ. ತಮ್ಮ ವಿರುದ್ಧವಾಗಿ ಅವರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವುದು ಗೊತ್ತಿದೆ. ನಾನು ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿದರು.
SCROLL FOR NEXT