ಸಿ. ಎಂ. ಲಿಂಗಪ್ಪ 
ರಾಜಕೀಯ

ಜೆಡಿಎಸ್ ಜೊತೆಗೆ ಮೈತ್ರಿ ಮುಂದುವರಿದರೆ, ಕಾಂಗ್ರೆಸ್ ನಾಮಾವಶೇಷ; ಎಂಎಲ್‏ಸಿ ಸಿಎಂ ಲಿಂಗಪ್ಪ ಎಚ್ಚರಿಕೆ

ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಕಾಂಗ್ರೆಸ್ ಹಿಂದೆ ಸರಿಯಬೇಕು, ಒಂದೊಮ್ಮೆ ಮೈತ್ರಿ ಮುಂದುವರಿಸಿದರೆ, ಪಕ್ಷ ನಾಮಾವಶೇಷವಾಗಲಿದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಮೇಲ್ಮನೆ ಸದಸ್ಯ ಸಿ ಎಂ ಲಿಂಗಪ್ಪ ಎಚ್ಚರಿಕೆ ನೀಡಿದ್ದಾರೆ.

ರಾಮನಗರ: ರಾಜ್ಯದಲ್ಲಿ  ಜೆಡಿಎಸ್ ಜೊತೆಗಿನ  ಮೈತ್ರಿಯಿಂದ ಕಾಂಗ್ರೆಸ್ ಹಿಂದೆ ಸರಿಯಬೇಕು, ಒಂದೊಮ್ಮೆ ಮೈತ್ರಿ ಮುಂದುವರಿಸಿದರೆ, ಪಕ್ಷ ನಾಮಾವಶೇಷವಾಗಲಿದೆ ಎಂದು  ಪಕ್ಷದ ಹಿರಿಯ ನಾಯಕ ಹಾಗೂ ಮೇಲ್ಮನೆ ಸದಸ್ಯ ಸಿ ಎಂ ಲಿಂಗಪ್ಪ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ಧಿಗಾರರೊಂದಿಗೆ ಇಂದು ಮಾತನಾಡಿದ ಅವರು,  ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಅತಿದೊಡ್ಡ ಪ್ರಮಾದ ಎಸಗಿದೆ ಎಂದು ಅಭಿಪ್ರಾಯಪಟ್ಟರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲನ್ನು ಪ್ರಸ್ತಾಪಿಸಿದ ಲಿಂಗಪ್ಪ, ದೇಶದ ಚುನಾವಣಾ ಇತಿಹಾಸದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಇಂತಹ ಅತಿ ಕೆಟ್ಟ ಸೋಲು ಎಂದೂ ಕಂಡಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್ ನೊಂದಿಗೆ ಮೈತ್ರಿ ಒಪ್ಪಂದಕ್ಕೆ ಕಾರಣರಾದ ಪಕ್ಷದ ಕೆಲ ರಾಜ್ಯ ನಾಯಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು, ಕೆಲವರಿಗೆ ಅಧಿಕಾರ ದಾಹ ಹೆಚ್ಚಾಗಿದ್ದು, ಅವರಿಗೆ ಪಕ್ಷದ ಹಿತಾಸಕ್ತಿ ಬೇಕಾಗಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

37 ಶಾಸಕರನ್ನು ಹೊಂದಿರುವ ಜೆಡಿಎಸ್ ಪಕ್ಷದ ನಾಯಕ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವುದನ್ನು ನೋಡಿ, 105 ಶಾಸಕರನ್ನು ಹೊಂದಿರುವ ಪಕ್ಷ ಸುಮ್ಮನಿರಲು ಸಾಧ್ಯವೇ ..? ಎಂದು ಪ್ರಶ್ನಿಸಿದರಲ್ಲದೇ,  ಅಧಿಕಾರ ಹಿಡಿಯಲು ಬಿಜೆಪಿ ನಾಯಕರು ನಡೆಸುತ್ತಿರುವ ಪ್ರಯತ್ನದಲ್ಲಿ ತಪ್ಪೇನಿದೆ, ಇದು ಸಹಜ ಕೂಡ ಎಂದು ಹೇಳಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎದುರು ಯಶಸ್ವಿ ಹೋರಾಟ ನಡೆಸಿ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಅಭಿನಂದಿಸಿದ ಲಿಂಗಪ್ಪ, ಕೆಲ ಕಾಂಗ್ರೆಸ್ ನಾಯಕರು ಬೆಂಬಲಿಸಿದ ಕಾರಣ ಆಕೆಗೆ ಜಯ ಸಾಧ್ಯವಾಯಿತು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT