ರಾಜಕೀಯ

ತವರು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲು? ಕಳಪೆ ಸಾಧನೆಯಿಂದ ಕುಂದುತ್ತಿದೆಯೇ ಸಿದ್ದು ವರ್ಚಸ್ಸು!

Shilpa D
ಮೈಸೂರು: ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಕೇವಲ 1 ಸ್ಥಾನದಲ್ಲಿ ಜಯಗಳಿಸುವ ಮೂಲಕ ಕಳಪೆ ಸಾಧನೆ ಮಾಡಿದೆ, ಮಾಜಿ ಮುಖ್ಯಮಂತ್ರಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಸಾಧನೆ ತುಂಬಾ ಬೇಸರ ಉಂಟು ಮಾಡಿದೆ. ಇದರಿಂದ ಸಿದ್ದರಾಮಯ್ಯ ಅವರ ವರ್ಚಸ್ಸು ಕುಸಿಯುತ್ತಿದೆಯೇ ಎಂಬ ಅನುಮಾನ ಮೂಡುವಂತೆ ಮಾಡಿದೆ. 

ತಮ್ಮ ತವರು ಜಿಲ್ಲೆಯಾದ ಮೈಸೂರು, ಚಾಮರಾಜನಗರ ಹಾಗೂ ಬಾಗಲಕೋಟೆಯಲ್ಲಿನ ಸೋಲು ಸಿದ್ದರಾಮಯ್ಯಗೆ ಅರಗಿಸಿಕೊಳ್ಳಲಾಗುತ್ತಿಲ್ಲ, ಇದು ಕಾಂಗ್ರೆಸ್ ಗೆ ಹೊಡೆತ ನೀಡಿದೆ ಎಂದು ಹೇಳಲಾಗುತ್ತಿದೆ.

ಮೋದಿ ಅಲೆಯಿಂದಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಗೆಲ್ಲಲಾಗಲಿಲ್ಲ,  ಬಿಜೆಪಿಯ ರಾಷ್ಟ್ರೀಯ ವಿಷಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿತ್ತು, ಜೊತೆಗೆ ಸಿದ್ದರಾಮಯ್ಯ ಅವರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳ ಸೋಲು ಸಿದ್ದರಾಮಯ್ಯ ಅವರ ನಿದ್ದೆಗೆಡಿಸಿದೆ. ಚಾಮರಾಜನಗರದಲ್ಲಿ ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಆರ್ ಧ್ರುವನಾರಾಯಣ ಅವರನ್ನು ಸೋಲಿಸಿದ್ದಾರೆ.

ಇನ್ನೂ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಭಾರೀ ಮತಗಳ ಅಂತರದಿಂದ ಸೋತಿರುವುದು  ಸಿದ್ದರಾಮಯ್ಯ ವಿರುದ್ಧದ ಆಕ್ರೋಶಕ್ಕೆ ಕಾರಣವಾಗಿದೆ.ತಮ್ಮ ಸ್ವಕ್ಷೇತ್ರ ಮೈಸೂರು ಜಿಲ್ಲೆಯಲ್ಲಿ  ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಸೋಲು ಸಿದ್ಧುಗೆ ದಿಗ್ಬ್ರಮೆ ಮೂಡಿಸಿದೆ, ಅಹಿಂದ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆಯಲು ಸಾಧ್ಯವಾಗಿಲ್ಲ, 

ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸೋಲು ಸಿದ್ದರಾಮಯ್ಯ ವಿರುದ್ಧದ ಆಕ್ರೋಶಕ್ಕೆ ಕಾರಣವಾಗಿದೆ ಇನ್ನೂ ಬಾಲಕೋಟಯಲ್ಲಿ ವೀಣಾ ಕಾಶಪ್ಪನವರ್ ಭಾರೀ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಲೋಕಸಭೆ ಚುನಾವಣಾ ಫಲಿತಾಂಶ ಕಾಂಗ್ರೆಸ್ ಹಾಗೂ ಸಿದ್ದರಾಮಯಯ್ಯ ವರ್ಚಸ್ಸಿಗೆ ಧಕ್ಕೆ ತಂದಿರುವುದು ನಿಜ.ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಸಾಧನೆ ತುಂಬಾ ಬೇಸರ ಉಂಟು ಮಾಡಿದೆ. ಇದರಿಂದ ಸಿದ್ದರಾಮಯ್ಯ ಅವರ ವರ್ಚಸ್ಸು ಕುಸಿಯುತ್ತಿದೆಯೇ ಎಂಬ ಅನುಮಾನ ಮೂಡುವಂತೆ ಮಾಡಿದೆ. 
ತಮ್ಮ ತವರು ಜಿಲ್ಲೆಯಾದ ಮೈಸೂರು, ಚಾಮರಾಜನಗರ ಹಾಗೂ ಬಾಗಲಕೋಟೆಯಲ್ಲಿನ ಸೋಲು ಸಿದ್ದರಾಮಯ್ಯಗೆ ಅರಗಿಸಿಕೊಳ್ಳಲಾಗುತ್ತಿಲ್ಲ, ಇದು ಕಾಂಗ್ರೆಸ್ ಗೆ ಹೊಡೆತ ನೀಡಿದೆ ಎಂದು ಹೇಳಲಾಗುತ್ತಿದೆ.
ಮೋದಿ ಅಲೆಯಿಂದಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಗೆಲ್ಲಲಾಗಲಿಲ್ಲ, ಬಿಜೆಪಿಯ ರಾಷ್ಟ್ರೀಯ ವಿಷಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿತ್ತು, ಜೊತೆಗೆ ಸಿದ್ದರಾಮಯ್ಯ ಅವರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳ ಸೋಲು ಸಿದ್ದರಾಮಯ್ಯ ಅವರ ನಿದ್ದೆಗೆಡಿಸಿದೆ. ಚಾಮರಾಜನಗರದಲ್ಲಿ ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಆರ್ ಧ್ರುವನಾರಾಯಣ ಅವರನ್ನು ಸೋಲಿಸಿದ್ದಾರೆ.
ಇನ್ನೂ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾನಿ ಭಾರೀ ಮತಗಳ ಅಂತರದಿಂದ ಸೋತಿರುವುದು ಸಿದ್ದರಾಮಯ್ಯ ವಿರುದ್ಧದ ಆಕ್ರೋಶಕ್ಕೆ ಕಾರಣವಾಗಿದೆ.ತಮ್ಮ ಸ್ವಕ್ಷೇತ್ರ ಮೈಸೂರು ಜಿಲ್ಲೆಯಲ್ಲಿ ಮೈತ್ರಿ ಅಭ್ಯರ್ಥಿ ವಿಜಯ್ ಶಂಕರ್ ಸೋಲು ಸಿದ್ಧುಗೆ ದಿಗ್ಬ್ರಮೆ ಮೂಡಿಸಿದೆ, ಅಹಿಂದ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪಡೆಯಲು ಸಾಧ್ಯವಾಗಿಲ್ಲ, 
ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸೋಲು ಸಿದ್ದರಾಮಯ್ಯ ವಿರುದ್ಧದ ಆಕ್ರೋಶಕ್ಕೆ ಕಾರಣವಾಗಿದೆ ಇನ್ನೂ ಬಾಗಲಕೋಟೆಯಲ್ಲಿ ವೀಣಾ ಕಾಶಪ್ಪನವರ್ ಭಾರೀ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಲೋಕಸಭೆ ಚುನಾವಣಾ ಫಲಿತಾಂಶ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ವರ್ಚಸ್ಸಿಗೆ ಧಕ್ಕೆ ತಂದಿರುವುದು ನಿಜ.
SCROLL FOR NEXT