ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಸಂಪುಟದಿಂದ ತೆಗೆದರೂ ಚಿಂತೆಯಿಲ್ಲ: ಡಿ.ಸಿ. ತಮ್ಮಣ್ಣ

ಒಂದು ವೇಳೆ ತಮ್ಮನ್ನು ಅಸಮರ್ಥ ಎಂದು ಪರಿಗಣಿಸಿ ಸಂಪುಟದಿಂದ ಕೈ ಬಿಟ್ಟರೂ ಚಿಂತಿಸುವುದಿಲ್ಲ ಎಂದು ಸಾರಿಗೆ ಸಚಿವ ಡಿ. ಸಿ. ತಮ್ಮಣ್ಣ ಹೇಳಿದ್ದಾರೆ.

ಡಿ. ಸಿ. ತಮ್ಮಣ್ಣ
Nagaraja AB
Updated On : 27 May 2019, 5:10 am

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಒಂದು ವೇಳೆ ತಮ್ಮನ್ನು ಅಸಮರ್ಥ ಎಂದು ಪರಿಗಣಿಸಿ ಸಂಪುಟದಿಂದ ಕೈ ಬಿಟ್ಟರೂ ಚಿಂತಿಸುವುದಿಲ್ಲ ಎಂದು ಸಾರಿಗೆ ಸಚಿವ ಡಿ. ಸಿ. ತಮ್ಮಣ್ಣ ಹೇಳಿದ್ದಾರೆ.

ಸಂಪುಟದಿಂದ ತೆಗೆದರೂ ಚಿಂತೆ ಇಲ್ಲ. ಹೊರಹೋಗಲು ಸಿದ್ಧನಿದ್ದೇನೆ. ಒಂದು ವೇಳೆ ಸಮರ್ಥನಾಗಿದ್ದಲ್ಲಿ ಮುಂದುವರೆಸಲಿ, ಅದನ್ನು ಬಿಟ್ಟು ಬೇರೆ ನನಗೆ ಯಾವುದೇ ಹುದ್ದೆ ಬೇಡ ಎಂದಿದ್ದಾರೆ.

ಸದ್ಯದಲ್ಲಿಯೇ  ಪಕ್ಷ ಪುನಾರಚನೆ ಅಥವಾ ವಿಸ್ತರಣೆ ಮಾಡಲಾಗುತ್ತದೆ  ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಪಕ್ಷ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಪ್ರಸ್ತುತ ರಾಜಕೀಯದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಮಾಧ್ಯಮಗಳಲ್ಲಿ ಮಾತನಾಡದಂತೆ ಅಥವಾ ರಾಜಕೀಯ ಬಗ್ಗೆ ಮಾತನಾಡದಂತೆ ನಮ್ಮ ಪಕ್ಷ ಆದೇಶಿಸಿದೆ ಎಂದು ಹೇಳಿದರು.

ಟಿವಿ ಚರ್ಚೆಗಳಲ್ಲಿ ಪಾಲ್ಗೊಳ್ಳದಂತೆ  ಮಾಧ್ಯಮಗಳಿಗೆ ಹೇಳಿಕೆ ನೀಡಿದಂತೆ ಆಪಕ್ಷದ ಶಾಸಕರು ಹಾಗೂ ವಕ್ತಾರರಿಗೆ ಜೆಡಿಎಸ್ ಕಾರ್ಯಾಧ್ಯಕ್ಷ ನಾರಾಯಣ ರಾವ್ ಆದೇಶ ಹೊರಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಹೀನಾಯವಾಗಿ ಸೋತ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments