ಸತೀಶ್ ಜಾರಕಿಹೊಳಿ 
ರಾಜಕೀಯ

ಮೂವರು ಬಂಡಾಯ ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ: ಸತೀಶ್ ಜಾರಕಿಹೊಳಿ

ಬಂಡಾಯ ಶಾಸಕರನ್ನು ಸಮಾಧಾನ ಪಡಿಸಲು ಮೂವರು ಸಚಿವರು ತಮ್ಮ ಸ್ಥಾನ ತ್ಯಜಿಸಿ ಅವರಿಗೆ ತಮ್ಮ ಹುದ್ದೆ ಬಿಟ್ಟುಕೊಡಲಿದ್ದಾರೆ ಎಂದು ಅರಣ್ಯ ಸಚಿವ ಸತೀಶ್ ..

ಬೆಳಗಾವಿ: ಬಂಡಾಯ ಶಾಸಕರನ್ನು ಸಮಾಧಾನ ಪಡಿಸಲು ಮೂವರು ಸಚಿವರು ತಮ್ಮ ಸ್ಥಾನ ತ್ಯಜಿಸಿ ಅವರಿಗೆ ತಮ್ಮ ಹುದ್ದೆ ಬಿಟ್ಟುಕೊಡಲಿದ್ದಾರೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ  ಸತೀಶ್ ಜಾರಕಿಹೊಳಿ, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸರ್ಕಾರ ಉಳಿಸಲು ಹಲವು ಶಾಸಕರು  ತಮ್ಮ ಹುದ್ದೆ ತ್ಯಜಿಸಲು ಮುಂದಾಗಿದ್ದಾರೆ ಎಂದು ಎಂದು ತಿಳಿಸಿದ್ದಾರೆ.
ಮೂವರು ಶಾಸಕರು ತಮ್ಮ ತಮ್ಮ ಸಚಿನ ಸ್ಥಾನ ತೊರೆಯಲಿದ್ದಾರೆ, ಆದರೆ ಆ ಮೂವರು ಯಾರು ಎಂದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ, ಸರ್ಕಾರ ಉಳಿಸುವ ಸಲುವಾಗಿ ಮೂವರು ಉನ್ನತ ಸಚಿವರು ತಮ್ಮ ಸ್ಥಾನ ತೊರೆಯಲಿದ್ದಾರೆ, ಒಂದು ವೇಳೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುವುದಾದರೇ ಅವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.
ತಮ್ಮ ಸಹೋದರ ಬಂಡಾಯ ಶಾಸಕ ರಮೇಶ್ ಜಾರಕಿ ಹೊಳಿ ಅವರ ಮನವೊಲಿಸುವ ಯಾವುದೇ ಪ್ರಯತ್ನಿಸುವುದಿಲ್ಲ ಎಂದು ಹೇಳಿದ್ದಾರೆ, ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರನ್ನು ತಮ್ಮ ಸಹೋದರ ರಮೇಶ್ ಜಾರಕಿಹೊಳಿ ಭೇಟಿ ಮಾಡಿರುವ ಬಗ್ಗೆ ತಮಗೇನು ಗೊತ್ತಿಲ್ಲ, ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡುತ್ತೇವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!