ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ರಾಜ್ಯದಲ್ಲಿ ಸರ್ಕಾರ ರಚಿಸುವ ಆತುರ ಇಲ್ಲ: ಬಿಜೆಪಿ

ಆಪರೇಷನ್ ಕಮಲದ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸುವ ಯಾವುದೇ ಆತುರ ಬಿಜೆಪಿಗೆ ಇಲ್ಲ ಎಂದು ರಾಜ್ಯ ಬಿಜೆಪಿ ವಕ್ತಾರ ಜಿ ಮಧುಸೂಧನ್ ಅವರು ಸೋಮವಾರ ಹೇಳಿದ್ದಾರೆ.

ಬಿಎಸ್ ಯಡಿಯೂರಪ್ಪ
Lingaraj Badiger
Updated On : 28 May 2019, 11:47 am
ಬೆಂಗಳೂರು: ಆಪರೇಷನ್ ಕಮಲದ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸುವ ಯಾವುದೇ ಆತುರ ಬಿಜೆಪಿಗೆ ಇಲ್ಲ ಎಂದು ರಾಜ್ಯ ಬಿಜೆಪಿ ವಕ್ತಾರ ಜಿ ಮಧುಸೂಧನ್ ಅವರು ಸೋಮವಾರ ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಿ, ಬಿಜೆಪಿ ಸರ್ಕಾರ ರಚಿಸುವ ಧಾವಂತ ಇಲ್ಲ. ನಾವು ಕಾದು ನೋಡುತ್ತೇವೆ ಎಂದು ಅವರು ತಿಳಿಸಿದ್ದಾರೆ.
ನಮಗೆ ಸಂಖ್ಯಾಬಲ ಇದೆ. ಶೀಘ್ರದಲ್ಲೇ ಸಮ್ಮಿಶ್ರ ಸರ್ಕಾರ ಪತನವಾಗಲಿದ್ದು, ನಾವು ನೂತನ ಸರ್ಕಾರ ರಚಿಸುತ್ತೇವೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ ಎಂಬ ವರದಿಗಳನ್ನು ತಳ್ಳಿಹಾಕಿದ ಮಧುಸೂಧನ್ ಅವರು, ಕಾಂಗ್ರೆಸ್ ಜೆಡಿಎಸ್ ಶಾಸಕರು ತಾವಾಗಿಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದರು.

Advertisement

Advertisement

ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಕೂಟ ಒಂದೋ ರಾಜೀನಾಮೆ ನೀಡಬೇಕು, ಇಲ್ಲವೇ ವಿಧಾನಸಭೆ ವಿಸರ್ಜಿಸಬೇಕು. ಮತ್ತೊಮ್ಮೆ ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಿದೆ'' ಎಂದು ಯಡಿಯೂರಪ್ಪ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿದ್ದವು.
ಇತ್ತೀಚಿಗಷ್ಟೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 28 ಕ್ಷೇತ್ರಗಳ ಪೈಕಿ 25 ರಲ್ಲಿ ಗೆಲುವು ಸಾಧಿಸಿದ್ದು, ಜನಾದೇಶ ಮೈತ್ರಿ ಸರ್ಕಾರ ವಿರುದ್ಧ ಬಂದಿದೆ. ಈ ಕೂಡಲೇ ರಾಜೀನಾಮೆ ನೀಡಬೇಕು ಇಲ್ಲವೆ ವಿಧಾಸಭೆ ವಿಸರ್ಜಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement