ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಸಿಎಂ ಎಚ್.ಡಿ ಕುಮಾರಸ್ವಾಮಿ ಸರ್ವಾಧಿಕಾರಿ ಧೋರಣೆಗೆ ಬಿಜೆಪಿ ಆಕ್ರೋಶ

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅಭಿವ್ಯಕ್ತಿ ಸ್ವಾತಂತ್ರ್ಯಹರಣ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ...

ಎಚ್.ಡಿ ಕುಮಾರಸ್ವಾಮಿ
Shilpa D
Updated On : 28 May 2019, 11:46 am
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅಭಿವ್ಯಕ್ತಿ ಸ್ವಾತಂತ್ರ್ಯಹರಣ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ  ಬಿಜೆಪಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಕುಟುಂಬದ ವಿರುದ್ಧ ಬರೆದಿದ್ದ ಪತ್ರಿಕೆಯೊಂದರ ಸಂಪಾದಕರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಸಂಬಂಧ ಬಿಜೆಪಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಪಕ್ಷದ ಮೊದಲ ಕುಟುಂಬವಾದ ದೇವೇಗೌಡರು ಎಫ್ ಐ ಆರ್  ದಾಖಲಿಸಿರುವುದು ಖಂಡನಾರ್ಹ ಎಂದು ಬಿಜೆಪಿ ನಾಯಕ ಬಿ.ಎಲ್ ಸಂತೋಷ್ ಹೇಳಿದ್ದಾರೆ.
ಬಿಜೆಪಿ ಮುಖಂಡರಾದ ಶೋಭಾ ಕರಂದ್ಲಾಜೆ ಮತ್ತು ಸಿ.ಟಿ ರವಿ ಕೂಡ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪತ್ರಿಕಾ ಸ್ವಾತಂತ್ರ್ಯಹರಣ ಮಾಡುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement

Advertisement

ಕುಮಾರಸ್ವಾಮಿ ಪತ್ರಕರ್ತರನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಆರೋಪಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement