ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಶೋಭಾ, ಭಾರತಿ ಶೆಟ್ಟಿ ಪಾತ್ರ ಮಹತ್ವದ್ದು: ಮೈತ್ರಿ ಪಕ್ಷ ಸರ್ಕಾರ ವಿಸರ್ಜಿಸಲಿ; ಯಡಿಯೂರಪ್ಪ

Shilpa D
ಬೆಂಗಳೂರು: ಮೈತ್ರಿ ಸರ್ಕಾರವನ್ನು ವಿಸರ್ಜಿಸಿ ಹೊಸದಾಗಿ ಚುನಾವಣೆಗೆ ಹೋದರೆ 150 ವಿಧಾನಸಭೆ ಕ್ಷೇತ್ರಗಳಲ್ಲಿ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿರುವ ಕಾಂಗ್ರೆಸ್‌-ಬಿಜೆಪಿ ಮೈತ್ರಿ ಕೂಟ ಒಂದೋ ರಾಜೀನಾಮೆ ನೀಡಬೇಕು, ಇಲ್ಲವೇ ವಿಧಾನಸಭೆ ವಿಸರ್ಜಿಸಬೇಕು. ಮತ್ತೊಮ್ಮೆ ಚುನಾವಣೆ ಎದುರಿಸಲು ಪಕ್ಷ ರೆಡಿಯಾಗಿದೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮವೊಂದರಲ್ಲಿ  ಮಾತನಾಡಿದ ಯಡಿಯೂರಪ್ಪ 224 ವಿಧಾನಸಭೆ ಕ್ಷೇತ್ರಗಳಲ್ಲಿ 150 ಸೀಟು ಬಿಜೆಪಿ ಗೆಲ್ಲಲಿದೆ, ರಾಜ್ಯದ 28 ಲೋಕಸಭೆ ಕ್ಷೇತ್ರಗಳ 150 ಕ್ಷೇತ್ರಗಳಲ್ಲಿ ಗೆದ್ದು ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದ್ದಾರೆ.
ಪ್ರತಿ ಲೋಕಸಭೆ ಕ್ಷೇತ್ರಗಳಲ್ಲಿ 8 ವಿಧಾನಸಭೆ ಕ್ಷೇತ್ರಗಳಿರುತ್ತವೆ, ಪ್ರತಿ ಲೋಕಸಭೆ ಕ್ಷೇತ್ರದ ಒಂದು ವಿಧಾನಸಭೆ ಕ್ಷೇತ್ರಗಳಲ್ಲಿ ವೋಟ್ ಶೇರಿಂಗ್ ಹೆಚ್ಚಿನ ಪ್ರಮಾಣದಲ್ಲಿದೆ, ರಾಜ್ಯ ಬಿಜೆಪಿ ಸರ್ಕಾರದಲ್ಲಿ ಇಂಧನ ಖಾತೆ ಸಚಿವೆಯಾಗಿದ್ದ  ಶೋಭಾ ಕರಂದ್ಲಾಜೆ ಅತಿ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭ ಕರಂದ್ಲಾಜೆ ಮೂರೂವರೆ ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಅವರಿಗೆ ಬಹಳ ಮುಖ್ಯವಾದ ಜವಾಬ್ದಾರಿ ನೀಡಬೇಕು. ಈ ಸಂಬಂಧ ಅಮಿತ್ ಶಾ ಮತ್ತು ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವುದಾಗಿ ಹೇಳಿದ್ದಾರೆ. 
ದೇವೇಗೌಡ, ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಎಚ್ ಮುನಿಯಪ್ಪ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದೆ, ಅದು ನಿಜವಾಗಿದೆ, ಬೆಂಗಳೂರು ಗ್ರಾಮಾಂತರ ಮತ್ತು ಹಾಸನದಲ್ಲಿ ಹೆಚ್ಚಿನ ಪ್ರಯತ್ನ ಪಟ್ಟಿದ್ದರೇ ಎಲ್ಲಾ 28 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತಿದ್ದೆವು ಎಂದು ತಿಳಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆದ್ದ  ಬಿಜೆಪಿ ಅಭ್ಯರ್ಥಿಗಳಿಗೆ ಶೀಘ್ರವೇ ಸನ್ಮಾನ ಸಮಾರಂಭ ಏರ್ಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಮಹಿಳಾ ನಾಯಕಿಯರ ಹೆಚ್ಚಿನ ಶ್ರಮ ಮತ್ತು ಪ್ರಯತ್ನದಿಂದಾಗಿ ಲೋಕಸಭೆ ಚುನಾವೆಯಲ್ಲಿ ಉತ್ತಮ ಜನಾದೇಶ ಸಿಕ್ಕಿದೆ, ವಿಶೇಷವಾಗಿ, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಭಾರತೀ ಶೆಟ್ಟಿ ಮತ್ತು ಶೋಭಾ ಕರಂದ್ಲಾಜೆ ಪಾತ್ರ ಅತಿ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.
SCROLL FOR NEXT