ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಮೈತ್ರಿ ಸರ್ಕಾರ ಸೇಫ್ ಬೆನ್ನಲ್ಲೇ ರಾಹುಲ್ ಗಾಂಧಿ ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದರು.

ಹೆಚ್ ಡಿ ಕುಮಾರಸ್ವಾಮಿ-ರಾಹುಲ್ ಗಾಂಧಿ
Vishwanath S
Updated On : 30 May 2019, 6:55 am
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಅವರು, ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.
ರಾಜ್ಯದ ಲೋಕಸಭಾ ಚುನಾವಣಾ ಫಲಿತಾಂಶ ನಂತರದ ಬೆಳವಣಿಗೆಗಳು, ಅತೃಪ್ತ ಶಾಸಕರ ನಡೆ ಹಾಗೂ ಅವರನ್ನು ಸಮಾಧಾನಪಡಿಸಲು ತೆಗೆದುಕೊಂಡಿರುವ ಕ್ರಮಗಳು, ಬಿಜೆಪಿ ಆಪರೇಷನ್ ಕಮಲದ ವಿರುದ್ಧ ಮೈತ್ರಿ ನಾಯಕರ ಕಾರ್ಯತಂತ್ರ, ಸಂಪುಟ ಪುನಾರಚನೆ, ನಿಗಮ ಮಂಡಳಿಗಳಲ್ಲಿ ಸ್ಥಾನ ಕಲ್ಪಿಸುವುದು ಸೇರಿದಂತೆ ಇನ್ನಿತರ ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದರು ಎನ್ನಲಾಗಿದೆ.

Advertisement

Advertisement

ಅಲ್ಲದೇ ರಾಷ್ಟ್ರರಾಜಕಾರಣಕ್ಕೆ ರಾಹುಲ್ ಗಾಂಧಿ ನಿರ್ಣಾಯಕವಾಗಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವಂತೆ ಕುಮಾರಸ್ವಾಮಿ ಮನವಿ ಮಾಡಿದರು ಎನ್ನಲಾಗಿದೆ.
ಕುಮಾರಸ್ವಾಮಿ ರಾಹುಲ್ ಭೇಟಿ ವೇಳೆ ಸಚಿವರಾದ ಬಂಡೆಪ್ಪ ಕಾಶಂಪುರ್ ಮತ್ತು ಸಾ.ರಾ. ಮಹೇಶ್ ಜೊತೆಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement