ಜೆಎನ್ ಗಣೇಶ್ 
ರಾಜಕೀಯ

ಕಂಪ್ಲಿ ಶಾಸಕ ಗಣೇಶ್ ಅಮಾನತು ಹಿಂಪಡೆದ ಕಾಂಗ್ರೆಸ್‌

ಮಹತ್ವದ ಬೆಳವಣಿಗೆಯಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರ ಅಮಾನತು ಆದೇಶವನ್ನು ಕಾಂಗ್ರೆಸ್ ಹಿಂಪಡೆದಿದೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರ ಅಮಾನತು ಆದೇಶವನ್ನು ಕಾಂಗ್ರೆಸ್ ಬುಧವಾರ ಹಿಂಪಡೆದಿದೆ.
ಈಗಲ್ಟನ್ ರೆಸಾರ್ಟ್‌ನಲ್ಲಿ ನಡೆದ ಗಲಾಟೆ ಬಳಿಕ ಕಂಪ್ಲಿ ಜೆ.ಎನ್.ಗಣೇಶ್ ಅವರನ್ನು ಕಾಂಗ್ರೆಸ್ ಅಮಾನತು ಮಾಡಿತ್ತು. ಆದರೆ ಇದೀಗ ಅಮಾನತು ಆದೇಶವನ್ನು ವಾಪಸ್ ಪಡೆಯಲಾಗಿದೆ. 
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಚರ್ಚಿಸಿ ಅಮಾನತು ಆದೇಶ ಹಿಂದಕ್ಕೆ ಪಡೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದ ನಂತರ ರಾಜ್ಯದಲ್ಲಿ ಆಪರೇಷನ್ ಕಮಲದ ಆಪತ್ತು ಎದುರಾಗಿದ್ದು, ಸರ್ಕಾರ ಉಳಿಸಿಕೊಳ್ಳಲು ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನದ ಫಲವಾಗಿ ಗಣೇಶ್ ಅಮಾನತು ಹಿಂಪಡೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!