ಕೆ,ಬಿ ಕೋಳಿವಾಡ ಮತ್ತು ಪದ್ಮಾವತಿ ಸುರೇಶ್ 
ರಾಜಕೀಯ

ರಂಗೇರುತ್ತಿದೆ ಉಪ ಚುನಾವಣಾ ಕದನ: ಅಖಾಡದಲ್ಲಿ ಮಾಜಿ ಸ್ಪೀಕರ್, ಶಾಸಕರ ಪತ್ನಿ

ತೀವ್ರ ಕುತೂಹಲ ಕೆರಳಿಸಿರುವ ಉಪ ಚುನಾವಣೆಗೆ ಅಖಾಡ ಸಜ್ಜಾಗಿದೆ. ಚುನಾವಣೆ ರಂಗೇರುತ್ತಿದ್ದಂತೆ ಉಪ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರು:  ತೀವ್ರ ಕುತೂಹಲ ಕೆರಳಿಸಿರುವ ಉಪ ಚುನಾವಣೆಗೆ ಅಖಾಡ ಸಜ್ಜಾಗಿದೆ. ಚುನಾವಣೆ ರಂಗೇರುತ್ತಿದ್ದಂತೆ ಉಪ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೈತ್ರಿ ಮುರಿದು ಸ್ವತಂತ್ರವಾಗಿ ಕಣಕ್ಕೆ ಇಳಿಯುತ್ತಿರುವ ಕಾಂಗ್ರೆಸ್ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ರಾಜ್ಯದ 15 ಕ್ಷೇತ್ರಗಳ ಚುನಾವಣೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ 15 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. 

ಈ ಪಟ್ಟಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನುಮೋದನೆ ನೀಡಿದ್ದಾರೆ. ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಉಪಚುನಾವಣೆ ಕಣಕ್ಕೆ ಇಳಿಯಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದಿಂದ ಭೀಮಣ್ಣ ನಾಯಕ್, ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದಿಂದ ಬಿ.ಎಚ್.ಬನ್ನಿಕೋಡ, ರಾಣೆಬೆನ್ನೂರು ಕ್ಷೇತ್ರದಿಂದ ಕೆ.ಬಿ.ಕೋಳಿವಾಡ ಹಾಗೂ ಚಿಕ್ಕಬಳ್ಳಾಪುರದಿಂದ ಎಂ.ಆಂಜನಪ್ಪ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. 

ಉಳಿದಂತೆ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದಿಂದ ಎಂ.ನಾರಾಯಣಸ್ವಾಮಿ, ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಿಂದ ಎಂ.ಶಿವರಾಜ್, ಹೊಸಕೋಟೆಯಿಂದ ಶಾಸಕ ಭೈರತಿ ಸುರೇಶ್ ಪತ್ನಿ ಪದ್ಮಾವತಿ ಸುರೇಶ್ ಹಾಗೂ ಮೈಸೂರು ಜಿಲ್ಲೆ ಹುಣಸೂರು ಕ್ಷೇತ್ರದಿಂದ ಎಚ್.ಪಿ.ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ. 

ಮುಂದಿನ ದಿನಗಳಲ್ಲಿ ಉಳಿದ 7 ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ರೋಷನ್ ಬೇಗ್ ರಾಜಿನಾಮೆಯಿಂದ ತೆರವಾಗಿರುವ ಶಿವಾಜಿನಗರ ಕ್ಷೇತ್ರಕ್ಕೆ ಎಂಎಲ್ ಸಿ ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ,.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT