ರಾಜಕೀಯ

ಶಾಲಾ ಪಠ್ಯ-ಪುಸ್ತಕದಿಂದ ಟಿಪ್ಪು ಇತಿಹಾಸ ತೆಗೆಯುವುದಿಲ್ಲ: ಸಚಿವ ಶ್ರೀರಾಮುಲು

Lingaraj Badiger

ರಾಯಚೂರು: ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಈ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಹೀಗಾಗಿ ಟಿಪ್ಪು ಸುಲ್ತಾನ್ ಜಯಂತಿ ಬದಲಾಗಿ ಕಲಾಂ ಜಯಂತಿ ಆಚರಿಸುವುದಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಶುಕ್ರವಾರ ಹೇಳಿದ್ದಾರೆ.

ಕಲಾಂ ಜಯಂತಿ ಮಾಡುವುದು ನಮ್ಮ ಉದ್ದೇಶವಾಗಿದೆ. ಹೀಗಾಗಿ ಟಿಪ್ಪು ಜಯಂತಿ ರದ್ದುಗೊಳಿಸಲಾಗಿದೆ. ಆದರೆ ಪಠ್ಯ-ಪುಸ್ತಕದಿಂದ ಟಿಪ್ಪು ಇತಿಹಾಸವನ್ನ ತೆಗೆದುಹಾಕುವುದಿಲ್ಲ. ಇದೆಲ್ಲ ಕೇವಲ ಉಹಾ ಪೋಹ ಅಷ್ಟೇ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇಂದು ನಗರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಅಬ್ದುಲ್ ಕಲಾಂ ಜಯಂತಿ ಆಚರಣೆಗೆ ತರುತ್ತೇವೆ. ಅಬ್ದುಲ್ ಕಲಾಂ ಅವರ ಜಯಂತಿ ಆಚರಣೆ ಮಾಡುವುದು ತಪ್ಪಾ? ಎಂದು ಪ್ರಶ್ನಿಸಿದರು.

ಪಠ್ಯ-ಪುಸ್ತಕದಿಂದ ಟಿಪ್ಪು ಇತಿಹಾಸವನ್ನ ತೆಗೆದುಹಾಕುವುದಿಲ್ಲ. ಇದೆಲ್ಲ ಕೇವಲ ಉಹಾಪೋಹ ಅಷ್ಟೇ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ನಿರ್ಧಾರವನ್ನು ಪ್ರಶ್ನಿಸಿದರು.

ಸದ್ಯ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದೆ. ಆ ಸಮಿತಿಯ ಮೂಲಕ ಎಲ್ಲ ನಿರ್ಧಾರ ತೆಗೆದುಕೊಳ್ಳ ಲಾಗುತ್ತದೆ. ಇದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟದ್ದು, ಕಮಿಟಿ ತೀರ್ಮಾನ ಮಾಡುತ್ತದೆ ಎಂದು ಹೇಳುವ ಮೂಲಕ ಸರ್ಕಾರದಲ್ಲೇ ಗೊಂದಲ ಇರುವುದನ್ನು ಬಹಿರಂಗಪಡಿಸಿದರು.

SCROLL FOR NEXT