ಸಂಗ್ರಹ ಚಿತ್ರ 
ರಾಜಕೀಯ

ಮುಂದಿನ ರಾಜಕೀಯ ಭವಿಷ್ಯಕ್ಕಾಗಿ ಬಿಜೆಪಿ ಸೇರ್ಪಡೆ: ಸಿ.ಎಚ್.ವಿಜಯ್ ಶಂಕರ್ ಸ್ಪಷ್ಟನೆ

ಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಸೇರುವ ನಿರ್ಧಾರ ಕೈಗೊಂಡಿರುವೆ ಎಂದು ಮಾಜಿ ಸಂಸದ ಸಿಎಚ್.ವಿಜ ಯ್ ಶಂಕರ್ ತಿಳಿಸಿದ್ದಾರೆ.

ಮೈಸೂರು: ಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಸೇರುವ ನಿರ್ಧಾರ ಕೈಗೊಂಡಿರುವೆ ಎಂದು ಮಾಜಿ ಸಂಸದ ಸಿಎಚ್.ವಿಜ ಯ್ ಶಂಕರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಅರ್ಜುನ ಅವಧೂತರನ್ನು ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಗೆ ಹಾಗೂ ರಾಜ್ಯಕ್ಕೆ ನಿಮ್ಮಿಂದ ಅನೇಕ ಕಾರ್ಯಗಳು ಆಗಬೇಕಿದೆ. ಹೀಗಾಗಿ ನೀವು ರಾಜಕೀಯದಲ್ಲಿ ಮುಂದುವರಿಯಬೇಕು ಎಂದು ಅವಧೂತರು ಆಶೀರ್ವಾ ದ ಮಾಡಿದ್ದಾರೆ. ಅವರ ಸಲಹೆಯಂತೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳುತ್ತೇನೆ. ಅವರ ಹಾರೈಕೆಯಲ್ಲಿ ನಂಬಿಕೆ ಇದೆ. ಒಂದೆರಡು ದಿನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಮರಳಿ ಪಕ್ಷಕ್ಕೆ ಸೇರುತ್ತಿದ್ದೇನೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದ ವಿಜಯ್ ಶಂಕರ್ ಅವರು ಬಿಜೆಪಿ ನಾಯಕ ಪ್ರತಾಪ್ ಸಿಂಹ ವಿರುದ್ಧ ಸೋಲನುಭವಿಸಿದ್ದರು. ಇದೀಗ ಅವರು ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT