ಉಡುಪಿಯಲ್ಲಿ ಸಿದ್ದರಾಮಯ್ಯ 
ರಾಜಕೀಯ

ನಾನು ಮತ್ತೆ ಸಿಎಂ ಆಗುತ್ತೇನೆಂಬ ಭಯದಿಂದ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ : ಸಿದ್ದರಾಮಯ್ಯ

ಮತ್ತೆ ನಾನು ಸಿಎಂ ಆಗುತ್ತೇನೆ ಎಂಬ ಭಯಕ್ಕೆ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ.ಸುಪ್ರೀಂ ಕೋರ್ಟ್​ನಲ್ಲಿ ಕಾಂಗ್ರೆಸ್​ ವಾದಕ್ಕೆ ಹಿನ್ನಡೆಯಾಗಿಲ್ಲ, ಪ್ರತ್ಯೇಕ ವಿಚಾರಣೆಗೆ ಕೊರ್ಟ್​ಗೆ ಮನವಿ ಮಾಡಿದ್ದೆವು ಇದಕ್ಕೆ ಸುಪ್ರೀಂ ಒಪ್ಪಿಲ್ಲ, ಹೀಗಾಗಿ ಇದಕ್ಕೆ ಹಿನ್ನಡೆ ಹೇಗಾಗುತ್ತೆ? ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಉಡುಪಿ: ಮತ್ತೆ ನಾನು ಸಿಎಂ ಆಗುತ್ತೇನೆ ಎಂಬ ಭಯಕ್ಕೆ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ.ಸುಪ್ರೀಂ ಕೋರ್ಟ್​ನಲ್ಲಿ ಕಾಂಗ್ರೆಸ್​ ವಾದಕ್ಕೆ ಹಿನ್ನಡೆಯಾಗಿಲ್ಲ, ಪ್ರತ್ಯೇಕ ವಿಚಾರಣೆಗೆ ಕೊರ್ಟ್​ಗೆ ಮನವಿ ಮಾಡಿದ್ದೆವು ಇದಕ್ಕೆ ಸುಪ್ರೀಂ ಒಪ್ಪಿಲ್ಲ, ಹೀಗಾಗಿ ಇದಕ್ಕೆ ಹಿನ್ನಡೆ ಹೇಗಾಗುತ್ತೆ? ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ನಗರದಲ್ಲಿ ನಡೆದ ಮಹಾತ್ಮ ಗಾಂಧಿ 150 ಸಮಾವೇಶದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರ ಆಡಿಯೋವನ್ನು ಸುಪ್ರೀಂಕೋರ್ಟ್ ಪರಿಶೀಲಿಸುವುದಾಗಿ ಹೇಳಿದೆ. ಪ್ರತ್ಯೇಕ ವಿಚಾರಣೆ ಬೇಡ,ತೀರ್ಪಿನ ವೇಳೆ ಆಡಿಯೋವನ್ನು ಪರಿಗಣಿಸು ವುದಾಗಿ ತಿಳಿಸಿದೆ ಎಂದು ಅವರು ಸ್ಪಷ್ಟಪಡಿಸಿದರು.

ಬಿಜೆಪಿಗೆ ಸಿದ್ದರಾಮಯ್ಯ ಅಂದ್ರೆ ಭಯ! ನಾನು ಬಿಜೆಪಿನ ಸೋಲಿಸುತ್ತೇನೆ ಎಂದು ಭಯ. ಅದಕ್ಕಾಗಿಯೇ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಯಡಿಯೂರಪ್ಪ ಆಡಿಯೋ ಪ್ರಕರಣದಲ್ಲಿ ಆದದ್ದೂ ಅದುವೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಅನರ್ಹ ಶಾಸಕ ಡಾ. ಸುಧಾಕರ್ ಹೇಳಿಕೆ ಬಗೆಗೆ ಪ್ರತಿಕ್ರಯಿಸಿದ ಸಿದ್ದರಾಮಯ್ಯ ಸುಧಾಕರ್ ಹೇಳೀದ್ದು ಸತ್ಯ. ಅವರಂತಹಾ ಹಲವರು ಪಕ್ಷಾಂತರ ಮಾಡಿದ್ದ ಕಾರಣ ನಾನು ಹಾಗೂ ಪಕ್ಷದ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪೀಕರ್ ಅವರಿಗೆ ದೂರು ಸಲ್ಲಿಸಿದ್ದೆವು. ಹಾಗಾಗಿ ಅವರು ಅನರ್ಹರಾಗಲು ನಾವೇ ಕಾರಣ ಎಂಬುದು ಸತ್ಯ ಎಂದಿದ್ದಾರೆ.

ಯಡಿಯೂರಪ್ಪ ತಾವೇ ಟಿಪ್ಪು ಎಂದಿದ್ರು!

ಟಿಪ್ಪು ಜಯಂತಿ ವಿಚಾರವಾಗಿ ಸಿಎಂ ಯಡಿಯೂರಪ್ಪ ಕಾಲೆಳೆದ ಸಿದ್ದರಾಮಯ್ಯ ಯಡಿಯೂರಪ್ಪ ಕೆಜೆಪಿ ಅಧ್ಯಕ್ಷರಾಗಿದ್ದ ವೇಳೆ ತಾವೇ ಟಿಪ್ಪು ವೇಷ ಹಾಕಿಕೊಂಡು , ಕೈಯಲ್ಲಿ ಕತ್ತಿ ಹಿಡಿದುಕೊಂಡು,ನಿಂತಿದ್ದರು. ಪಕ್ಕದಲ್ಲಿ  ಶೋಭಾ ಕರಂದ್ಲಾಜೆ  ಸಹ ಇದ್ದರು. ಆಗ ಯಡಿಯೂರಪ್ಪ  'ನಾನೇ ಟಿಪ್ಪು' ಎಂದು ಹೇಳಿದ್ದರು ಎಂದು ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT