ಟಿಪ್ಪು ಪಠ್ಯ, ಬಿಜೆಪಿಯಿಂದ ಇತಿಹಾಸ ತಿರುಚುವ ಕೆಲಸ- ಈಶ್ವರ್ ಖಂಡ್ರೆ
ಮೈಸೂರು ಹುಲಿ ಟಿಪ್ಪು ಸುಲ್ತಾನ್ ಕುರಿತ ಪಾಠವನ್ನು ಶಾಲಾಮಕ್ಕಳ ಪಠ್ಯಪುಸ್ತಕದಿಂದ ಕೈಬಿಡುವ ಮೂಲಕ ಬಿಜೆಪಿ ಇತಿಹಾಸವನ್ನು ತಿರುಚುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಬೆಂಗಳೂರು: ಮೈಸೂರು ಹುಲಿ ಟಿಪ್ಪು ಸುಲ್ತಾನ್ ಕುರಿತ ಪಾಠವನ್ನು ಶಾಲಾಮಕ್ಕಳ ಪಠ್ಯಪುಸ್ತಕದಿಂದ ಕೈಬಿಡುವ ಮೂಲಕ ಬಿಜೆಪಿ ಇತಿಹಾಸವನ್ನು ತಿರುಚುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇತಿಹಾಸ ತಿರುಚುವ ಮೂಲಕ ಜನರ ಭಾವನೆ ಕೆರಳಿಸಿ, ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಹೊರಟಿದ್ದಾರೆ. ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಟಿಪ್ಪು ಬ್ರಿಟಿಷ್ ರ ವಿರುದ್ದ ಹೋರಾಟ ಮಾಡಿದ್ದು, ಅತನನ್ನು ಪಠ್ಯದಿಂದ ತೆಗೆಯುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಟೀಕಿಸಿದರು.
ಈ ಸಂಬಂಧ ಉಚ್ಚ ನ್ಯಾಯಾಲಯ ಸಹ ಬುಧವಾರ ಸರ್ಕಾರಕ್ಕೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ. ಹೀಗಾಗಿ ಸರ್ಕಾರ ಈ ನಿಟ್ಟಿನಲ್ಲಿ ಜಾಗೃತವಾಗಿ, ಜನರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.