ರಾಜಕೀಯ

ಉಪಚುನಾವಣೆ: ಸುಪ್ರೀಂ ತೀರ್ಪಿನ ಬಳಿಕ 7 ಕ್ಷೇತ್ರಗಳಿಗೆ ಕೈ ಅಭ್ಯರ್ಥಿಗಳ ಆಯ್ಕೆ

Srinivasamurthy VN

ಬೆಂಗಳೂರು: ಉಪಚುನಾವಣೆ ನಡೆಯುವ ಹದಿನೈದು ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಈ ಜಿಲ್ಲೆಗಳ ವ್ಯಾಪ್ತಿಗೆ ನಿಯೋಜಿತರಾದ ವೀಕ್ಷಕರೊಂದಿಗೆ ಕೆಪಿಸಿಸಿ ನಾಯಕರು ಮಹತ್ವದ ಸಭೆ ನಡೆಸಿದರು.

ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್ 15 ಕ್ಷೇತ್ರಗಳ ಪೈಕಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಉಪಚುನಾವಣೆಯನ್ನು ಅತ್ಯಂತ ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್ ಈ ಸಾರಿ ಎಲ್ಲಾ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಪೈಪೋಟಿಯನ್ನು ಹೇಗೆ ಎದುರಿಸಬೇಕು ಎನ್ನುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದೆ. 

ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ಶಾಸಕರ ರಾಜೀನಾಮೆ ಹಾಗೂ ನಂತರ ಅನರ್ಹತೆಯಿಂದ ತೆರವಾಗಿರುವ ಈ ಕ್ಷೇತ್ರಗಳನ್ನು ಮರಳಿ ಪಡೆಯುವ ಗುರಿ ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದೆ. ಭಾನುವಾರ ಸಹ ಮಹತ್ವದ ಸಭೆ ನಡೆಸಿ ಗೆಲುವಿನ ರೂಪುರೇಷೆ ಹೆಣೆದಿದೆ.

SCROLL FOR NEXT