ರಾಜಕೀಯ

ಕಾಂಗ್ರೆಸ್ ಹಿರಿಯ ಮುಖಂಡರ ಜೊತೆ ಸಿದ್ದು ಸಭೆ: ಮುನಿಯಪ್ಪ, ಹರಿಪ್ರಸಾದ್‌ಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ

Manjula VN

ಬೆಂಗಳೂರು: ಉಪಚುನಾವಣೆಯನ್ನು ಗೆಲ್ಲುವ ಮೂಲಕ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನ ಮುಂದುವರೆಸಿದ್ದು, ಪಕ್ಷ ಸಂಘಟನೆ, ಅಭ್ಯರ್ಥಿಗಳ ಅಖೈರು ಹಿನ್ನೆಲೆಯಲ್ಲಿ ಕೆಪಿಸಿಸಿ ಹಿರಿಯ ಮುಖಂಡರು ಇಂದು ಸಭೆ ನಡೆಸಿದರು.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ರಾಜ್ಯಸಭಾ ಮಾಜಿ ಸದಸ್ಯ ರಹಮಾನ್ ಖಾನ್, ಮಾಜಿ ಸಚಿವರಾದ ಬಸವರಾಜ ರಾಯರೆಡ್ಡಿ, ಕೆ.ಜೆ.ಜಾರ್ಜ್ ಟಿ.ಬಿ.ಜಯಚಂದ್ರ, ರಮೇಶ್ ಕುಮಾರ್, ಮೋಟಮ್ಮ, ಮಾಜಿ ಸಂಸದ ಧೃವನಾರಾಯಣ್, ಮೇಲ್ಮನೆ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಕೆಪಿಸಿಸಿ ಒಕ್ಕಲಿಗರ ನಾಯಕರ ಸಭೆ
ಕೆಪಿಸಿಸಿ‌ ಕಚೇರಿಯಲ್ಲಿ ಸಿದ್ದರಾಮಯ್ಯ ಉಪಚುನಾವಣೆ ಹಿನ್ನೆಲೆಯಲ್ಲಿ ಹಿರಿಯ ನಾಯಕರೊಂದಿಗೆ ಸಭೆ ಬಳಿಕ ಒಕ್ಕಲಿಗ ನಾಯಕರ ಸಭೆ ನಡೆಸಿದರು.

ಸಭೆಯಲ್ಲಿ ಒಕ್ಕಲಿಗ ಸಮುದಾಯದ ಡಿ.ಕೆ.ಶಿವಕುಮಾರ್, ಟಿ. ಬಿ. ಜಯಚಂದ್ರ , ಕೃಷ್ಣಭೈರೇಗೌಡ, ಎಂ. ಕೃಷ್ಣಪ್ಪ, ಚೆಲುವರಾಯಸ್ವಾಮಿ ಸೇರಿ ಕೆಲ ಮುಖಂಡರು ಭಾಗಿಯಾಗಿದ್ದು, ಚುನಾವಣೆಗೆ ಸಮುದಾಯದ ಪ್ರಾತಿನಿಧ್ಯ ಬಗ್ಗೆ ಚರ್ಚೆ ಹಾಗೂ ಪಕ್ಷದ ನಾಯಕತ್ವದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.

ಹದಿನೈದು ಕ್ಷೇತ್ರಗಳ ಉಪಚುನಾವಣಾ ಕ್ಷೇತ್ರಗಳಲ್ಲಿ ಕನಿಷ್ಠ ಹನ್ನೆರಡು ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಸಾಧಿಸಲಿದೆ, ಮಾತ್ರವಲ್ಲ ಹದಿನೈದು ಕ್ಷೇತ್ರಗಲ್ಲೂ ಗೆಲುವು ಸಾಧಿಸಿದರೆ ಅಚ್ಚರಿಯಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

SCROLL FOR NEXT