ರಾಜಕೀಯ

ಉಪಸಮರ: 12 ಕ್ಷೇತ್ರಗಳ ಮೇಲೆ ಡಿಕೆಶಿ ಕಣ್ಣು, ಅಭ್ಯರ್ಥಿಗಳ ಆಯ್ಕೆ ಕುರಿತು ಮಹತ್ವದ ಸಭೆ

Manjula VN

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಮಾಜಿ ಸಚಿವ ಡಿಕೆ.ಶಿವಕುಮಾರ್ ಅವರು 12 ಕ್ಷೇತ್ರಗಳ ಮೇಲೆ ಕಣ್ಣಿದ್ದು, 15 ಕ್ಷೇತ್ರಗಳ ಉಪಚುನಾವಣೆ ಸಂಬಂಧ ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಿದರು. 

ಪಕ್ಷದಲ್ಲಿ ತಮ್ಮ ಅಗತ್ಯತೆ ಎಷ್ಟಿದೆ ಎಂಬುದನ್ನು ಸಭೆ ಮೂಲಕ ಡಿ.ಕೆ.ಶಿವಕುಮಾರ್ ಅವರು ತೋರಿಸಿದ್ದಾರೆ. ಸಭೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಾತಿನಿಧ್ಯವಿರುವ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚರ್ಚೆ ಡಿಕೆ.ಶಿವಕುಮಾರ್  ಅವರು ಚರ್ಚೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿದ್ದು, ಹೀಗಾಗಿ ಈ ಕ್ಷೇತ್ರವನ್ನು ಉಪಚುನಾವಣೆಯಲ್ಲಿ ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಕುರಿತು ಚರ್ಚೆ ನಡೆದಿದೆ. 

ಸಭೆಯಲ್ಲಿ ಕೆಲ ಕ್ಷೇತ್ರಗಳಿಗಷ್ಟೇ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಿದ್ದು, 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಗತ್ಯವಿದೆ. ಈ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಸುಪ್ರೀಂಕೋರ್ಟ್ ಆದೇಶ ಬಂದ ಬಳಿಕವಷ್ಟೇ ಅಂತಿಮಗೊಳಿಸಲು ಕಾಂಗ್ರೆಸ್ ಸಭೆಯಲ್ಲಿ ತೀರ್ಮಾನಗೊಂಡಿದೆ ಎಂದು ಹೇಳಲಾಗುತ್ತಿದೆ. 

ಇನ್ನು ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲಲು ಈ ಹಿಂಮದೆ ನಿರ್ಧರಿಸಿದ್ದರು. ಇದೀಗ ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆಂಬ ಮಾತಗಳು ಕೇಳಿ ಬರುತ್ತಿವೆ. 

ಈ ನಡುವೆ ಡಿಕೆಶಿ ಜೈಲಿನಿಂದ ಬಿಡುಗಡೆಯಾದ ಬಳಿಕ ಬಚ್ಚೇಗೌಡ ಅವರು ಯಾವುದೇ ರ್ಯಾಲಿಯಲ್ಲಿಯೂ ಪಾಲ್ಗೊಳ್ಳದ ಕಾರಣ ಪಕ್ಷದಲ್ಲಿ ಆಕ್ರೋಶಗಳು ವ್ಯಕ್ತವಾಗತೊಡಗಿವೆ ಎಂದು ಹೇಳಲಾಗುತ್ತಿದೆ.  ಈ ಬಾರಿಯ ಉಪಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಟೆಯ ಪ್ರಶ್ನೆಯಾಗಿದ್ದು, ಚುನಾವಣೆಯಲ್ಲಿ ಒಕ್ಕಲಿಗರು ಯಾರಿಗೆ ಬೆಂಬಲ ನೀಡುತ್ತಾರೆಂಬುದು ಇದೀಗ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. 

SCROLL FOR NEXT