ರಾಜಕೀಯ

ಸ್ಪೀಕರ್ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್: ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಿಗೂ ಗ್ರೀನ್ ಸಿಗ್ನಲ್ 

Shilpa D

ನವದೆಹಲಿ: 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿದೆ.

17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ 2023ರವರೆಗೆ ಅಂದರೆ ವಿಧಾನಸಭೆ ಅವಧಿ ಮುಗಿಯವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಮರು ಚುನಾವಣೆಯಲ್ಲಿ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ ಎಂದು ತಿಳಿಸಿದೆ.
 

SCROLL FOR NEXT