ಸಂಗ್ರಹ ಚಿತ್ರ 
ರಾಜಕೀಯ

ಉಪ ಚುನಾವಣೆ: ಯಶವಂತಪುರ ಕ್ಷೇತ್ರಕ್ಕೆ ಪಿ.ನಾಗರಾಜ್ ಕಾಂಗ್ರೆಸ್ ಅಭ್ಯರ್ಥಿ

ಯಶವಂತಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಿ. ನಾಗರಾಜ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಿ. ನಾಗರಾಜ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇಲ್ಲಿನ ಚುನಾವಣಾ ಕಣದಿಂದ ರಾಜ್ ಕುಮಾರ್ ಹಿಂದೆ ಸರಿದ ಕಾರಣ ಪಿ. ನಾಗರಾಜ್ ಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಖುದ್ದು ಕಾಂಗ್ರೆಸ್ ಹೈ ಕಮಾಂಡ್ ಪಿ. ನಾಗರಾಜ್ ಗೆ ಟಿಕೆಟ್ ನೀಡಿದೆ.

ಈಗಾಗಲೇ ರಾಜ್ಯ ಉಪ ಚುನಾವಣೆಗೆ 14 ಕ್ಷೇತ್ರಗಳಿಗೂ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. 

ಮೊದಲಿಗೆ ಯಶವಂತಪುರದಿಂದ ರಾಜ್ ಕುಮಾರ್ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು. ಆದರೆ, ಎಸ್. ಟಿ ಸೋಮಶೇಖರ್ ಎದುರು ಸ್ಪರ್ಧಿಸಲು ರಾಜ್ ಕುಮಾರ್ ಹಿಂದೇಟು ಹಾಕಿದ್ದಾರೆ. ಕ್ಷೇತ್ರದ ಪ್ರಮುಖ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಪಿ. ನಾಗರಾಜ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!