ರಾಜಕೀಯ

ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿ,‌ ಜೆಡಿಎಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Lingaraj Badiger

ಬೆಂಗಳೂರು: ರಾಜ್ಯದಲ್ಲಿ ಡಿಸೆಂಬರ್ 5 ರಂದು ನಡೆಯಲಿರುವ 15 ಕ್ಷೇತ್ರಗಳ ಉಪ ಚುನಾವಣಾ ಕಣ ರಂಗೇರಿದ್ದು, ಯಶವಂತಪುರ ವಿಧಾನಸಭಾ ಕ್ಷೇತ್ರದ ಉಪ ಚನಾವಣೆಗೆ ಬಿಜೆಪಿಯಿಂದ ಎಸ್.ಟಿ.ಸೋಮಶೇಖರ್, ಪ್ರತಿಸ್ಪರ್ಧಿಯಾಗಿ ಜೆಡಿಎಸ್ ನಿಂದ ಜವರಾಯಿಗೌಡ ಸೋಮವಾರ ಪಕ್ಷದ ಮುಖಂಡರ ಜೊತೆಯಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆಯ ದಿನವಾಗಿದ್ದು, ಇಂದೇ ಬಹುತೇಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ.

ಎಸ್​ಟಿ ಸೋಮಶೇಖರ್ ಅವರು ನಾಮಪತ್ರ ಸಲ್ಲಿಸುವ ಮುನ್ನ ಮುನ್ನ ಆಂಜನೇಯ ಸ್ವಾಮಿ ದೇವರ ಆಶೀರ್ವಾದ ಪಡೆದರು. ಈ ವೇಳೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಜೊತೆಯಿದ್ದರು.

ನಾಮಪತ್ರ ಸಲ್ಲಿಸಿದ ಬಳಿಕ ಎಸ್.ಟಿ.ಸೋಮಶೇಖರ್ ಮಾತನಾಡಿ, ಇಪ್ಪತ್ತು ವರ್ಷಗಳಿಂದ ನಾನು ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಪಾದರಸದಂತೆ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಯಡಿಯೂರಪ್ಪ ಅವರ ಜೊತೆ ಸೇರಿ ಕ್ಷೇತ್ರಕ್ಕಾಗಿ ಶ್ರಮಿಸುತ್ತೇನೆ ಎಂದರು.

ಇನ್ನು ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಅವರು ಪಾದಯಾತ್ರೆ ಮೂಲಕ ಬಂದು ನಾಮಪತ್ರ ಸಲ್ಲಿಸಿದರು. ಜವರಾಯಿಗೌಡ ಅವರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಾಥ್ ನೀಡಿದರು.

ಇನ್ನು ಕಾಂಗ್ರೆಸ್​​​ ಅಭ್ಯರ್ಥಿಯಾಗಿ ಪಾಳ್ಯ ನಾಗರಾಜ್ ಕೂಡ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.

SCROLL FOR NEXT