ರೋಷನ್ ಬೇಗ್ 
ರಾಜಕೀಯ

ಕೈಕೊಟ್ಟ ಜೆಡಿಎಸ್-ಬಿಜೆಪಿ: ಉಪಚುನಾವಣಾ ಕಣದಿಂದ ರೋಷನ್ ಬೇಗ್ ಔಟ್!

ಟಿಕೆಟ್ ನೀಡದೆ ಕೈಕೊಟ್ಟ ಬಿಜೆಪಿ ನಿಲುವಿನಿಂದ ಬೇಸತ್ತು ಶಿವಾಜಿನಗರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದ ಅನರ್ಹ ಶಾಸಕ ರೋಷನ್ ಬೇಗ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಬೆಂಗಳೂರು: ಟಿಕೆಟ್ ನೀಡದೆ ಕೈಕೊಟ್ಟ ಬಿಜೆಪಿ ನಿಲುವಿನಿಂದ ಬೇಸತ್ತು ಶಿವಾಜಿನಗರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದ ಅನರ್ಹ ಶಾಸಕ ರೋಷನ್ ಬೇಗ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

ಬಿಜೆಪಿ ಪಕ್ಷದಿಂದ ಟಿಕೆಟ್​ ಕೈತಪ್ಪಿದ್ದರಿಂದ ಬೇಗ್​ಅವರು ಅತಂತ್ರರಾಗಿದ್ದರು. ಐಎಂಎ ಹಗರಣದಲ್ಲಿ ಬೇಗ್​ ಹೆಸರು ತಳುಕುಹಾಕಿಕೊಂಡಿದ್ದರಿಂದ ಬಿಜೆಪಿ ಟಿಕೆಟ್​ನೀಡಿಲ್ಲ ಎನ್ನಲಾಗುತ್ತಿದೆ ಸಾಮಾಜಿಕ ಜಾಲತಾಣದಲ್ಲಿ ಶಿವಾಜಿನಗರ ಜನತೆಗೆ ಕೃತಜ್ಞತೆ ಸಲ್ಲಿಸಿರುವ ರೋಷನ್​​​​ ಬೇಗ್​ಐಎಂಎ ಪ್ರಕರಣದಿಂದ ಚುನಾವಣೆಯಲ್ಲಿ ಹಿನ್ನಡೆ ಆಗುವ ಆತಂಕದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸದಿರಲು ನಿರ್ಧರಿಸಿದ್ದು,ಚುನಾವಣೆಯಲ್ಲಿ ತಟಸ್ಥರಾಗಿ ಉಳಿಯುವ ತೀರ್ಮಾನವನ್ನು ಕೈಕೊಂಡಿದ್ದಾರೆ.

ನಿನ್ನೆ ಅನರ್ಹ ಶಾಸಕ ರೋಷನ್​ ಬೇಗ್​ ಬೆಂಬಲಿಗರ ಸಭೆ ನಡೆಸಿ ಚುನಾವಣಾ ಕಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್​ನಿಂದ ದೂರವಾಗಿ, ಬಿಜೆಪಿಗೆ ಬೇಡವಾಗಿ ಅತಂತ್ರ ಸ್ಥಿತಿಯಲ್ಲಿದ್ದ ರೋಷನ್ ಬೇಗ್​​ ಭಾನುವಾರ ಹಾಸನಕ್ಕೆ ತೆರಳಿ ಜೆಡಿಎಸ್ ನಾಯಕರ ಜತೆಗೆ ರಹಸ್ಯ ಮಾತುಕತೆ ನಡೆಸಿದ್ದರು.ಆದರೆ ಜೆಡಿಎಸ್ ಟಿಕೆಟ್ ಸಿಗದಿದ್ದ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದರು ಎನ್ನಲಾಗಿದೆ.

ಆದರೆ ಅಂತಿಮ ಕ್ಷಣದಲ್ಲಿ ಕಣದಿಂದ ಹಿಂದೆ ಸರಿಯುವ ಮೂಲಕ ಬಿಜೆಪಿ ಅಭ್ಯರ್ಥಿಗೆ ಗೆಲುವಿಗೆ ಬೆಂಬಲಿಸುವಂತೆ ಬಿಜೆಪಿ ವರಿಷ್ಠರು ಮನವೊಲಿಸಿದ್ದಾರೆ ಎನ್ನಲಾಗಿದೆ.

ಐಎಂಎ ಪ್ರಕರಣ,ರುದ್ರೇಶ್ ಹತ್ಯೆ ಪ್ರಕರಣಗಳು ಅವರಿಗೆ ಉರುಳಾಗಿರುವ ಹಿನ್ನೆಲೆ ರೋಷನ್ ಬೇಗ್ ಪ್ರಕರಣಗಳಿಂದ ಹೊರ ಬರಬರುವ ತನಕ ಯಾವುದೇ ರಾಜಕೀಯ ಪಕ್ಷಗಳು ಅವರನ್ನು ಹತ್ತಿರ ಸೇರಿಸಕೊಳ್ಳಲು ಹಿಂದೇಟು ಹಾಕಿವೆ.ರಾಜಕೀಯ ಭವಿಷ್ಯ ಹಾಗೂ ಕ್ಷೇತ್ರವನ್ನು ಕಳೆದುಕೊಳ್ಳುವ ಭೀತಿ ಹಿನ್ನಲೆಯಲ್ಲಿ ಪಕ್ಷೇತರನಾಗಿ ಕಣಕ್ಕಿಳಿಯುವಂತೆ ಬೆಂಬಲಿಗರು ಒತ್ತಾಯಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT