ರಾಜಕೀಯ

ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಗಳಿಗೆ ಘಟಾನುಘಟಿ ನಾಯಕರ ಸಾಥ್

Shilpa D

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರು ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸಿದ್ದರು, ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿ ರೋಡ್ ಶೋ ನಡೆಸಿದರು.

ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ್ದರಿಂದ ಹಲವು ಸ್ಥಳಗಳಲ್ಲಿ ರೋಡ್ ಶೋ ನಡೆಸಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು. ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು.

ಇನ್ನು ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರಿಗೆ ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದ್ದರು.ಮಾಜಿ ಸಚಿವ ಎಂಟಿಬಿ ನಾಗಾರಾಜ್ ಅವರಿಗೆ ಸಿಎಂ ಯಡಿಯೂರಪ್ಪ ಜೊತೆಗೂಡಿ ನಾಮಪತ್ರ ಸಲ್ಲಿಸಿದ್ದಾರೆ, 

ಇನ್ನು ಶಿವಾಜಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಾಥ್ ನೀಡಿದ್ದಾರೆ, ವಿಜಯನಗರದಲ್ಲಿ ಸಚಿವ ಶ್ರೀರಾಮುಲು ಮತ್ತು ಡಿಸಿಎಂ ಗೋವಿಂದ್ ಕಾರಜೋಳ ಅವರ ಜೊತೆಗೂಡಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ನಾಮಪತ್ರ ಸಲ್ಲಿಸಿದರು.

ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶ್ರೀಮಂತ್ ಪಾಟೀಲ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ಕೆ.ಗೋಪಾಲಯ್ಯ ಅವರಿಗೆ ಕೇಂದ್ರ ಸಚಿವ ಡಿವಿ ಸದಾನಂದಗೌಡ ಮತ್ತು ಸೋಮಣ್ಣ ಜೊತೆಗಿದ್ದರು,  ಯಶವಂತ ಪುರ ಕ್ಷೇತ್ರದಲ್ಲಿ ಎಸ್ ಟಿ ಸೋಮಶೇಖರ್ ಶೋಭಾ ಕರಂದ್ಲಾಜೆ ಸಾಥ್ ನೀಡಿದ್ದರು.

ಇನ್ನೂ ಹಿರೇಕೆರೂರು ಬಿಜೆಪಿ ಅಭ್ಯರ್ಥಿಯಾಗಿ ಬಿಸಿ ಪಾಟೀಲ್  ಗೃಹ ಸಚಿವ  ಬಸವರಾಜ್ ಬೊಮ್ಮಾಯಿ ಜೊತೆಗೂಡಿ ನಾಮಪತ್ರ ಸಲ್ಲಿಸಿದರು.

SCROLL FOR NEXT