ರಾಜಕೀಯ

ಹೇಮಲತಾ ಗೋಪಾಲಯ್ಯ ಸೇರಿ ಜೆಡಿಎಸ್ ನ ಹಲವರ ಉಚ್ಛಾಟನೆ- ಎಚ್. ಕೆ. ಕುಮಾರಸ್ವಾಮಿ

Nagaraja AB

ಬೆಂಗಳೂರು: ಬಿಬಿಎಂಪಿ ಸದಸ್ಯರಾದ ಹೇಮಲತಾ ಗೋಪಾಲಯ್ಯ, ಮಹಾದೇವ, ಬಿಬಿಎಂಪಿ ಮಾಜಿ ಸದಸ್ಯ ಎನ್. ಜಯರಾಮ್ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷವಿರೋಧಿ ಚಟುವಟಿಕೆ ನಡೆಸಿದ ಹಾಗೂ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ ಹಿನ್ನಲೆಯಲ್ಲಿ‌ ಪಕ್ಷದ  ಬಿಬಿಎಂಪಿ ಸದಸ್ಯರಾದ ಗೋಪಾಲಯ್ಯ ಪತ್ನಿ ಹೇಮಲತಾ ಗೋಪಾಲಯ್ಯ, ಮಹಾದೇವ, ಬಿಬಿಎಂಪಿ ಮಾಜಿ ಸದಸ್ಯ ಎನ್.ಜಯರಾಮ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಅಲ್ಲದೇ, ಜೆಡಿಎಸ್ ಕಾರ್ಯಕರ್ತರ ಮೇಲೆ ವಿನಾಕಾರಣ ಹಲ್ಲೆ ಮಾಡಿರುವ ಬಸವೇಶ್ವರ ನಗರ ಸಿಪಿಐ ಸೋಮಶೇಖರ್ ಅವರನ್ನು  ವರ್ಗಾವಣೆ ಮಾಡುವಂತೆ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಅಭ್ಯರ್ಥಿ ಅನರ್ಹ ಶಾಸಕ ಗೋಪಾಲಯ್ಯ ಅವರು ಜೆಡಿಎಸ್ ಅಭ್ಯರ್ಥಿ ಡಾ.ಗಿರೀಶ್ ನಾಶಿ ಅವರಿಗೆ ನಾನಾ ರೀತಿಯಲ್ಲಿ ಆಮಿಷಗಳನ್ನು ಒಡ್ಡುವ ಮೂಲಕ ಬಿಜೆಪಿಗೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದು,‌ಇದಕ್ಕೆ ಒಪ್ಪಿಗೆ ನೀಡದ ನಾಶಿ ಅವರ ಮೇಲೆ ಬಸವೇಶ್ವರ ನಗರ ಸರ್ಕಲ್ ಇನ್ಸ್ ಪೆಕ್ಟರ್ ಮೂಲಕ ಹಲ್ಲೆ ಮಾಡಿಸಿದ್ದಾರೆ.ಹೀಗಾಗಿ ಪೊಲೀಸ್ ಅಧಿಕಾರಿ ವರ್ಗಾವಣೆಗೆ ದೂರು ನೀಡಲಾಗಿದೆ ಎಂದು  ಹೆಚ್‌.ಕೆ.ಕುಮಾರಸ್ವಾಮಿ ತಿಳಿಸಿದರು. 

SCROLL FOR NEXT