ನಿಜವಾಗಿಯೂ ನಡೆದಿದ್ದು ಇದು: ಸಚಿವ ಮಾಧುಸ್ವಾಮಿ ಸ್ಪಷ್ಟನೆ
ಕುರುಬ ಸಮುದಾಯದ ಶ್ರೀಈಶ್ವರಾನಂದಪುರಿ ಸ್ವಾಮೀಜಿ ಅವರಿಗೆ ಅಗೌರವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಕುರುಬ ಸಮುದಾಯದ ಶ್ರೀಈಶ್ವರಾನಂದಪುರಿ ಸ್ವಾಮೀಜಿ ಅವರಿಗೆ ಅಗೌರವ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ನಿಜವಾಗಿಯೂ ನಡೆದಿದ್ದು ಇದು, ಆದರೇ ಕೆಲವು ಕ್ಷುದ್ರ ಶಕ್ತಿಗಳು ಅಲ್ಲಿ ನಡೆದ ಘಟನೆಯನ್ನು ತಮಗೆ ಬೇಕಾದಂತೆ ತಿರುಚಿ, ನನ್ನ ಮೇಲೆ ವ್ಯವಸ್ಥಿತ ಷಡ್ಯಂತ್ರ ನಡೆಸಿದರು ಎಂದು ಕಾನೂನು ಸಚಿವ ಜೆ ಸಿ ಮಧುಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನನ್ನ ನಿಲುವನ್ನು ನಾನು ಅಂದೇ ಸ್ಪಷ್ಟಪಡಿಸಿದ್ದರೂ, ವಿನಾಕಾರಣ ನನ್ನ ಮೇಲೆ ಆರೋಪಗಳ ಸುರಿಮಳೆ ಮಾಡಲಾಯಿತು. ನಡೆದ ಘಟನೆಯನ್ನು ಎಲ್ಲರಿಗೂ ತಲುಪಿಸಿ ಎಂದು ಮನವಿ ಮಾಡಿದ್ದಾರೆ.
ಕೆಲವೊಂದಿಷ್ಟು ಪಟ್ಟಭದ್ರ ಹಿತಾಸಕ್ತಿಗಳು ಚುನಾವಣಾ ಸಮಯ ವಾಗಿದ್ದರಿಂದ ಈ ತರನಾಗಿ ಸಮಾಜದಲ್ಲಿ ಒಡಕನ್ನು ಮೂಡಿಸುವ ಕೆಲಸ ಮಾಡುತ್ತಿವೆ, ಶ್ರೀ ಗಳೆ ಸ್ಪಷ್ಟ ಪಡಿಸಿದ್ದಾರೆ ನಾನು ಶ್ರೀ ಗಳಿಗೆ ಏಕಚನದಲ್ಲಿ ನಿಂದಿಸಿಲ್ಲವೆಂದು ಮತ್ಯಾವ ಸಾಕ್ಷಿ ಬೇಕು ಹೇಳಿ? ಎಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.