ರಾಜಕೀಯ

'ಡಿಸಿಎಂ ಮಾತ್ರ ಆಗಲ್ಲ, ಆದರೆ ಮುಖ್ಯಮಂತ್ರಿಯಾಗ್ತೀನಿ, ಇಲ್ಲದಿದ್ರೆ ಸುಮ್ಮನಿರ್ತಿನಿ'

Shilpa D

ಬೆಳಗಾವಿ:  ನಾನು ಮುಖ್ಯಮಂತ್ರಿ ಆಗುತ್ತೇನೆ. ಇಲ್ಲವಾದರೆ ಮಂತ್ರಿಯಾಗಿ ಕೆಲಸ ಮಾಡಿಕೊಂಡಿರುತ್ತೇನೆ, ಯಾವುದೇ ಕಾರಣಕ್ಕೂ ಡಿಸಿಎಂ ಆಗುವುದಿಲ್ಲ ಎಂದು ಮಾಜಿ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಉಮೇಶ್ ಕತ್ತಿ, ಕಾರ್ಯಕರ್ತರು ಒಗ್ಗಟ್ಟಾಗಿ ಉಪಚುನಾವಣೆಯಲ್ಲಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಕರೆ ನೀಡಿದ್ದಾರೆ.

ಇಲ್ಲಿ ಯಾರು ಅನರ್ಹರಲ್ಲ, ಎಲ್ಲರೂ ಅರ್ಹರು. ರಮೇಶ್ ಜಾರಕಿಹೊಳಿ ಗೆದ್ದರೆ ಡಿಸಿಎಂ ಆಗುತ್ತೇನೆ ಎಂದು ಹೇಳುತ್ತಾರೆ. ರಮೇಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ಸಿಕ್ಕರೆ ಖುಷಿ. ನಮ್ಮ ಭಾಗದ ನಾಯಕರಿಗೆ ಡಿಸಿಎಂ ಸ್ಥಾನ ಸಿಕ್ಕರೆ ನಮಗೆ ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ.

ಮಾಧುಸ್ವಾಮಿ ಕನಕಪೀಠದ ವಿಚಾರವನ್ನು ಸಿದ್ದರಾಮಯ್ಯನವರು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಈ ವಿಚಾರ ಪರಿಣಾಮ ಬೀರಬೇಕು ಎಂಬುವುದು ಸಿದ್ದರಾಮಯ್ಯನವರ ಪ್ಲಾನ್ ಆಗಿದೆ ಎಂದು ಉಮೇಶ್ ಕತ್ತಿ ಆರೋಪಿಸಿದರು

ನಾನು ಮುಖ್ಯಮಂತ್ರಿ ಆಗುತ್ತೇನೆ. ಇಲ್ಲವಾದರೆ ಮಂತ್ರಿಯಾಗಿ ಕೆಲಸ ಮಾಡಿಕೊಂಡಿರುತ್ತೇನೆ, ಯಾವುದೇ ಕಾರಣಕ್ಕೂ ಡಿಸಿಎಂ ಆಗುವುದಿಲ್ಲ ಎಂದು ಮಾಜಿ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಉಮೇಶ್ ಕತ್ತಿ, ಕಾರ್ಯಕರ್ತರು ಒಗ್ಗಟ್ಟಾಗಿ ಉಪಚುನಾವಣೆಯಲ್ಲಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಕರೆ ನೀಡಿದ್ದಾರೆ.

ಇಲ್ಲಿ ಯಾರು ಅನರ್ಹರಲ್ಲ, ಎಲ್ಲರೂ ಅರ್ಹರು. ರಮೇಶ್ ಜಾರಕಿಹೊಳಿ ಗೆದ್ದರೆ ಡಿಸಿಎಂ ಆಗುತ್ತೇನೆ ಎಂದು ಹೇಳುತ್ತಾರೆ. ರಮೇಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ಸಿಕ್ಕರೆ ಖುಷಿ. ನಮ್ಮ ಭಾಗದ ನಾಯಕರಿಗೆ ಡಿಸಿಎಂ ಸ್ಥಾನ ಸಿಕ್ಕರೆ ನಮಗೆ ಸಂತೋಷವಾಗುತ್ತದೆ ಎಂದು ಹೇಳಿದ್ದಾರೆ.

ಮಾಧುಸ್ವಾಮಿ ಕನಕಪೀಠದ ವಿಚಾರವನ್ನು ಸಿದ್ದರಾಮಯ್ಯನವರು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಈ ವಿಚಾರ ಪರಿಣಾಮ ಬೀರಬೇಕು ಎಂಬುವುದು ಸಿದ್ದರಾಮಯ್ಯನವರ ಪ್ಲಾನ್ ಆಗಿದೆ ಎಂದು ಉಮೇಶ್ ಕತ್ತಿ ಆರೋಪಿಸಿದರು.

SCROLL FOR NEXT