ಕುಮಾರಸ್ವಾಮಿ, ಸೋಮಶೇಖರ್ 
ರಾಜಕೀಯ

ಎಚ್ ಡಿಕೆ ಮುಖ್ಯಮಂತ್ರಿಯಾಗಿದ್ದಾಗ ಸ್ಟಾರ್ ಹೋಟೆಲ್ ನಲ್ಲಿ ಕಡತಗಳಿಗೆ ಸಹಿ ಪಡೀತಿದ್ದ ನಟಿ : ಸೋಮಶೇಖರ್ ಬಾಂಬ್

ರಾಜ್ಯದಲ್ಲಿ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಅಖಾಡದಲ್ಲಿ ಆರೋಪ, ಪ್ರತ್ಯಾರೋಪಗಳ ಸರಣಿ ಮುಂದುವರೆದಿದೆ

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಅಖಾಡದಲ್ಲಿ ಆರೋಪ, ಪ್ರತ್ಯಾರೋಪಗಳ ಸರಣಿ ಮುಂದುವರೆದಿದೆ. ಈ ಮಧ್ಯೆ ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಟಿ ಸೋಮಶೇಖರ್ ಸಿಡಿಸಿರುವ ಬಾಂಬ್ ರಾಜ್ಯರಾಜಕೀಯದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದೆ. 

ಪ್ರಚಾರದ ಸಭೆಯಲ್ಲಿ ಮಾತಾಡಿರುವ ಸೋಮಶೇಖರ್, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸ್ಯಾಂಡಲ್ ವುಡ್ ನಟಿಯೊಬ್ಬರು ಫೈವ್ ಸ್ಟಾರ್ ಹೋಟೆಲ್ ನಲ್ಲಿ ರೂಂ ಬುಕ್ ಮಾಡಿ ಬಿಎಡಿ ಕಮೀಷನರ್ ರಾಕೇಶ್ ಸಿಂಗ್ ಅವರಿಂದ ಸಹಿ ಪಡೆಯುತ್ತಿದ್ದರು ಎಂದು ಆರೋಪ ಮಾಡಿದ್ದಾರೆ. ಆಗ ಬಿಡಿಎ ಅಧ್ಯಕ್ಷರಾಗಿದ್ದರಿಂದ ಅದರ ಮಾಹಿತಿ ಬೇಕಿತ್ತು. ನಾನು ಮಾಧ್ಯಮದವರನ್ನು ಒಂದಲ್ಲ ಏಳು ಬಾರಿ ಕರೆಸಿ ಇದರ ಬಗ್ಗೆ ತಿಳಿಸಿದ್ದೆ ಎಂದು ಅವರು ಹೇಳಿದ್ದಾರೆ. 

ಈ ವಿಷಯವಾಗಿ ಬಹಿರಂಗ ಚರ್ಚೆಗೂ ಕೂಡಾ ಸಿದ್ಧವಾಗಿರುವುದಾಗಿ ತಿಳಿಸಿರುವ ಸೋಮಶೇಖರ್,  ಸ್ಟಾರ್ ಹೋಟೆಲ್ ನಲ್ಲಿ ಕಡತಗಳಿಗೆ ಸಹಿ ಪಡೆಯುತ್ತಿದ್ದ ನಟಿ  ಯಾರು? ಎಂಬುದನ್ನು ಹೇಳಿಲ್ಲ . ಇದು ರಾಜ್ಯ ರಾಜಕೀಯದಲ್ಲಿ ತೀವ್ರವಾದ ಅನುಮಾನಗಳಿಗೆ ಕಾರಣವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ