ಕುಮಾರಸ್ವಾಮಿ 
ರಾಜಕೀಯ

ಸರ್ಕಾರ ಉಳಿಸುತ್ತೇನೆ, ಆದರೆ ಯಾವ ಸರ್ಕಾರ ಎಂಬುದನ್ನು ಡಿಸೆಂಬರ್ 9ರಂದು ಗೊತ್ತಾಗುತ್ತೆ: ಕುಮಾರಸ್ವಾಮಿ ಲೇವಡಿ

ಮುಖ್ಯಮಂತ್ರಿಗಳು ಪ್ರಾಣ ಕೊಡಬೇಕಾಗಿರೋದು ಈ ರಾಜ್ಯದ ಜನರ ಸಮಸ್ಯೆಗಳಿಗಾಗಿ ಆದರೆ ಇವರ ಬಾಯಲ್ಲಿ ಅನರ್ಹರ ಆಮಿಷಕ್ಕೆ ಒಳಗಾಗಿರುವ ಶಾಸಕರಿಗಾಗಿ ಪ್ರಾಣ ಕೊಡುತ್ತೇನೆ ಎಂದು ಹೇಳಿದ್ದಾರೆ.ಇಂತಹ ಮುಖ್ಯಮಂತ್ರಿ ನಿಮಗೇ ಬೇಕಾ? ಎಂದು ಮತದಾರರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿಗಳು ಪ್ರಾಣ ಕೊಡಬೇಕಾಗಿರೋದು ಈ ರಾಜ್ಯದ ಜನರ ಸಮಸ್ಯೆಗಳಿಗಾಗಿ ಆದರೆ ಇವರ ಬಾಯಲ್ಲಿ ಅನರ್ಹರ ಆಮಿಷಕ್ಕೆ ಒಳಗಾಗಿರುವ ಶಾಸಕರಿಗಾಗಿ ಪ್ರಾಣ ಕೊಡುತ್ತೇನೆ ಎಂದು ಹೇಳಿದ್ದಾರೆ.ಇಂತಹ ಮುಖ್ಯಮಂತ್ರಿ ನಿಮಗೇ ಬೇಕಾ? ಎಂದು ಮತದಾರರಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಯಶವಂತಪುರದ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಅವರು,ನಾನು ಎಂದಿಗೂ ಜಾತಿಯ ಹೆಸರಲ್ಲಿ ರಾಜಕಾರಣ ಮಾಡಿಲ್ಲ.ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಡ ಜನರು ಭೇಟಿ ಮಾಡುವು ದಕ್ಕೆ ಸಾಧ್ಯಗಾವುದಿಲ್ಲ.ಈ ಭಾಗದ ಮಾಜಿ ಶಾಸಕರು ಹಿಂದಿನ ಸರ್ಕಾರ ಹಣವನ್ನೇ ನೀಡಿಲ್ಲ ಎಂದು ಹೇಳಿದ್ದಾರೆ.

ನಾನು ಅವರಿಗೆ ಸವಾಲು ಹಾಕುತ್ತೇನೆ.ಈ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದನಿದ್ದೇನೆ. ನೂರಾರು ಕೋಟಿ ಈ ಕ್ಷೇತ್ರಕ್ಕೆ ಅನುದಾನ ಕೊಟ್ಟಿದ್ದೇನೆ. ಈ ಅಭ್ಯರ್ಥಿ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ವಿರುದ್ಧ ಕುಮಾರಸ್ವಾಮಿ ತಿರುಗೇಟು ನೀಡಿದರು.

ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು 17 ಶಾಸಕರಿಗೆ ಆಮಿಷ ಒಡ್ಡಿ ನಮ್ಮ‌ ಸರ್ಕಾರ ಪತನಗೊಳಿಸಿದರು. ನಿನ್ನೆ ಮುಖ್ಯಮಂತ್ರಿ ಯಡಿಯೂರಪ್ಪ ಚುನಾವಣಾ ಪ್ರಚಾರ ದ ವೇಳೆ ಅಭಿವೃದ್ಧಿ ಬಗ್ಗೆ ಮಾತನಾಡಿದ್ದು,ಅನರ್ಹರಿಗಾಗಿ ಪ್ರಾಣ ಕೊಡುತ್ತೇನೆ ಎಂದು ಹೇಳುತ್ತಿದ್ಧಾರೆ.

ಗೋಕಾಕ್ ನಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸಮುದಾಯ ಏನಾದ ರೂ ಆಗಲಿ, ಬೇರೆಯವರು ಗೆಲ್ಲಲಿ ಎಂದು ಹೇಳುತ್ತಾರೆ. ಇವರು ಎಷ್ಟು ಕೀಳುಮಟ್ಟಕ್ಕೆ ಇಳಿದಿದ್ದಾರೆ ಎನ್ನುವುದನ್ನು ನೀವೇ ನೋಡಿ ಎಂದು ಲೇವಡಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!