ಸಿದ್ದರಾಮಯ್ಯ, ಎನ್. ರವಿಕುಮಾರ್ 
ರಾಜಕೀಯ

ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಸ್ಸೀಮ  - ಎನ್. ರವಿಕುಮಾರ್ 

ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮನಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಟೀಕಿಸಿದ್ದಾರೆ.

ಹೊಸಪೇಟೆ : ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮನಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಹೇಳುವುದೆಲ್ಲಾ ಸುಳ್ಳು. ಸುಳ್ಳು ಹೇಳುವುದು ಅವರಿಗೆ ಕುಟುಂಬದ ದೇವರಿದ್ದಂತೆ. ಅವರು ಸುಳ್ಳುಗಳ ಚಾಂಪಿಯನ್ ಆಗಿದ್ದಾರೆ ಎಂದಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಹೇಳುವುದು ಸಂಪೂರ್ಣ ಸುಳ್ಳಿನಿಂದ ಕೂಡಿದ್ದರೆ , ಸಿದ್ದರಾಮಯ್ಯ ಅರ್ಧ ಸುಳ್ಳು ಹೇಳುತ್ತಾರೆ. ಇದೇ ಇವರಿಬ್ಬರ ನಡುವಿನ ವ್ಯತ್ಯಾಸ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ಚುನಾವಣೆಯಲ್ಲಿ ಸೋತರೆ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ. ಕಾಂಗ್ರೆಸ್ ಅಭ್ಯರ್ಥಿ ಸೋಲುವ ಭೀತಿಯಲ್ಲಿ ಇವರಿಬ್ಬರೂ ಹೊಸಪೇಟೆಗೆ ಗುರುವಾರ ಭೇಟಿ ನೀಡುತ್ತಿದ್ದಾರೆ.  ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರ ವರ್ತನೆಯಿಂದ ಬೇಸತ್ತು ಹಿರಿಯ ಕಾಂಗ್ರೆಸ್ ಮುಖಂಡರು ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಾಳೆ ಆನಂದ್ ಸಿಂಗ್ ಪರ ಪ್ರಚಾರ ನಡೆಸಲಿದ್ದಾರೆ. ನವೆಂಬರ್ 30 ರಂದು ಬಿಜೆಪಿಯಿಂದ ದಲಿತ ಮುಖಂಡರ ಸಮಾವೇಶವನ್ನು ಆಯೋಜಿಸಲಾಗಿದೆ  ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!