ಆನಂದ್ ಸಿಂಗ್ 
ರಾಜಕೀಯ

ವಿಜಯನಗರ ಕ್ಷೇತ್ರ ಉಪ ಚುನಾವಣೆ: ಕಣ್ಣೀರು ಹಾಕಿದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ 

ರಾಜ್ಯದಲ್ಲಿ ಉಪ ಚುನಾವಣೆಯ ಪ್ರಚಾರದ ಅಖಾಡ ರಂಗೇರಿದ್ದು, ಹೊಸಪೇಟೆಯ ಹೊಸೂರು ಗ್ರಾಮದಲ್ಲಿ ಪ್ರಚಾರ ನಡೆಸಿದ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಕಣ್ಣೀರು ಹಾಕಿದ್ದಾರೆ. 

ಹೊಸಪೇಟೆ: ರಾಜ್ಯದಲ್ಲಿ ಉಪ ಚುನಾವಣೆಯ ಪ್ರಚಾರದ ಅಖಾಡ ರಂಗೇರಿದ್ದು, ಹೊಸಪೇಟೆಯ ಹೊಸೂರು ಗ್ರಾಮದಲ್ಲಿ ಪ್ರಚಾರ ನಡೆಸಿದ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಕಣ್ಣೀರು ಹಾಕಿದ್ದಾರೆ. 

ಮಗನ ಮದುವೆ ಕಾರ್ಯಕ್ರಮ ಭಾಗವಹಿಸದ್ದಕ್ಕೆ ಭಾವುಕರಾದ ಆನಂದ್ ಸಿಂಗ್, ಕಣ್ಣೀರು  ಸುರಿಸಿದ್ದಾರೆ.  ನಿನ್ನೆ ಅವರ  ಮಗ ಸಿದ್ಧಾರ್ಥ ಸಿಂಗ್ ಮದಲಿಂಗ ಶಾಸ್ತ್ರ ಕಾರ್ಯಕ್ರಮದಲ್ಲಿ  ಭಾಗಿಯಾಗಿದ್ದಿಲ್ಲ, ದೇವರ ಮೇಲೆ ಭಾರ ಹಾಕಿದಿನಿ, ಸಮಾಜ ಸೇವೆ ಮಾಡುವ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿರುವುದಾಗಿ ಹೇಳಿದ್ದಾರೆ.

ಇನ್ನೂ ಮತದಾರರಿಗೆ ಗೋಲ್ಡ್ ಕಾಯಿನ್ ಹಂಚುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆನಂದ್ ಸಿಂಗ್, ನಾನು ಯಾರ ಮೇಲೆ ಆರೋಪ, ಅಥವಾ ಟೀಕೆಯನ್ನು ಮಾಡಲ್ಲ, ಆರೋಪ ಮಾಡಿದವರು ನನಗಿಂತ ಹಿರಿಯರು, ಅವರ ಅನುಭವದಷ್ಟು ನನ್ನ ವಯಸ್ಸಿಲ್ಲ, ಅವರು ಆರೋಪ ಮಾಡಿದ್ದು ಎಷ್ಟು ಸತ್ಯ ಸುಳ್ಳು ಎಂಬುದು ನನಗೆ ಗೊತ್ತಿಲ್ಲ ಎಂದರು.

ಚುನಾವಣೆಯಲ್ಲಿ ಆರೋಗ್ಯಕರ ಪೈಪೋಟಿ ಇರಬೇಕು. ಒಬ್ಬರ ಮೇಲೆ ಒಬ್ಬರು ವೈಯಕ್ತಿಕ ವಿಚಾರ ಇಟ್ಟುಕೊಂಡು ಆರೋಪಮಾಡುವುದು ಸರಿ ಅಲ್ಲ, ತಮ್ಮ ಮಗನ ಮದುವೆ ವಿಚಾರಕ್ಕೆ ಸಂಭಂದಿಸಿದಂತೆ ಚುನಾವಣಾ ಆಯೋಗಕ್ಕೆ ಮಾಹಿತಿ ಸಲ್ಲಿಸಿದ್ದೇನೆ ಎಂದು ಆನಂದ್ ಸಿಂಗ್ ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

3rd T20I: ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್, ವಿಂಡೀಸ್ ಗೆ ಗೆಲ್ಲಲು 224 ರನ್ ಗುರಿ ನೀಡಿದ ಭಾರತ