ಸಂಗ್ರಹ ಚಿತ್ರ 
ರಾಜಕೀಯ

ಕೆ.ಜೆ.ಜಾರ್ಜ್ ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸಿದ್ದರಾಮಯ್ಯ ಹುಂಡಿ ಬಹಿರಂಗ: ಬಿ.ಸಿ.ಪಾಟೀಲ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ಜೆ. ಜಾರ್ಜ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸಿದ್ದರಾಮಯ್ಯರ ಹುಂಡಿ ಎಲ್ಲೆಲ್ಲಿದೆ ಎಂಬುದು ಗೊತ್ತಾಗಲಿದೆ. ಆಗ ಯಾರು ನಾಲಾಯಕ್ ಎಂಬುದು ಗೊತ್ತಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಅನರ್ಹ ಶಾಸಕ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ.

ಹಾವೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ಜೆ. ಜಾರ್ಜ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸಿದ್ದರಾಮಯ್ಯರ ಹುಂಡಿ ಎಲ್ಲೆಲ್ಲಿದೆ ಎಂಬುದು ಗೊತ್ತಾಗಲಿದೆ. ಆಗ ಯಾರು ನಾಲಾಯಕ್ ಎಂಬುದು ಗೊತ್ತಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಅನರ್ಹ ಶಾಸಕ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ.

ಹಿರೆಕೇರೂರಿನ ತಮ್ಮ ಸ್ವಗ್ರಹದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ನಾಲಾಯಕ್ ಅಂದರೆ ನೀವೂ ನಾಲಾಯಕ್ ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

ಕುರಿ ಕೋಳಿ ಎಮ್ಮೆ ಥರ ಶಾಸಕರು ಮಾರಾಟ ಆದರು ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋದಾಗ ಎಷ್ಟು ಕೋಟಿಗೆ ತಮ್ಮನ್ನು ಮಾರಿಕೊಂಡಿದ್ದರು. ಅವರು ಮಾರಿಕೊಂಡಿರುವುದಕ್ಕಾಗಿ ಅವರಿಗೆ ಈ ಮಾರಾಟ ಸಂಸ್ಕೃತಿಯ ಬಗ್ಗೆ ಅರಿವಿದೆ ಎಂದು ಪಾಟೀಲ್ ತಿರುಗೇಟು ನೀಡಿದ್ದಾರೆ.

ಈ ಹಿಂದೆ ಬಿಸಿ ಪಾಟೀಲ್ ವಿರುದ್ಧ ಟ್ವೀಟ್ ಮಾಡಿ ಕಿಡಿಕಾರಿದ್ದ ಸಿದ್ದರಾಮಯ್ಯ ಅವರು, 'ಬಿ.ಸಿ ಪಾಟೀಲ್ ಒಳ್ಳೆಯ ಪೊಲೀಸ್ ಆಗಿರಲಿಲ್ಲ ಹಾಗೂ ಒಳ್ಳೆಯ ಶಾಸಕನೂ ಅಲ್ಲ' ಎಂದು ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದರು. ಈ ಟ್ವೀಟ್ ಗೆ ಬಿಸಿ ಪಾಟೀಲ್ ಇದೀಗ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT